April 26, 2025

Newsnap Kannada

The World at your finger tips!

chalavadi

ನೀನು ನಾಲಾಯಕ್‌, ಯಾವತ್ತಿದ್ರೂ ಅಸ್ಪೃಶ್ಯ ಎಂದ ಸಿದ್ದು ವಿರುದ್ಧ ಛಲವಾದಿ ದೂರು : ಬಂಧನಕ್ಕೆ ಒತ್ತಾಯ

Spread the love

ಮಾಜಿ ಸಿಎಂ ಸಿದ್ದರಾಮಯ್ಯ ನನ್ನ ಮೇಲೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ, ಸದ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಭರದಲ್ಲಿ ತಾವು ಸದಾ ಅಸ್ಪೃಶ್ಯ ಅಂತಾ ನಮ್ಮ ಜಾತಿ ನಿಂದನೆ ಮಾಡಿದ್ದಾರೆ. ಸಿದ್ದರಾಮಯ್ಯ ಬಗ್ಗೆ ನಮಗೆ ಬಹಳ ಗೌರವ ಇದೆ. ಅವರು ಮುಖ್ಯಮಂತ್ರಿ ಆಗಿದ್ದವರು, ಇಂದು ವಿಪಕ್ಷ ನಾಯಕರಾಗಿರುವವರು. ಜೂನ್ 7ರಂದು ನಾರಾಯಣಸ್ವಾಮಿ ಅವರೇ, ನೀವು ಸದಾ ಅಸ್ಪೃಶ್ಯರು ಅಂತಾ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಿಮ್ಮ ಗುಲಾಮ ಮನಸ್ಥಿತಿಗೆ ನನ್ನ ಧಿಕ್ಕಾರವಿರಲಿ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ನನ್ನನ್ನು ನಿಂದಿಸುವ ಭರದಲ್ಲಿ ನನ್ನ ಜಾತಿಯನ್ನು ನಿಂದಿಸಿದ್ದಾರೆ. ಈ ವಿಚಾರ ದೌರ್ಜನ್ಯ ತಡೆ ಕಾಯ್ದೆಅಡಿ ದೂರು ನೀಡಿದ್ದೇನೆ. ಜಾತಿ ನಿಂದನೆ ಕೇಸ್ ದಾಖಲಿಸಿದ್ದೇನೆ, ಅವರನ್ನು ಅರೆಸ್ಟ್ ಮಾಡಬೇಕಾಗುತ್ತದೆ. ಇದರಲ್ಲಿ ಯಾವುದೇ ರೀತಿಯ ತಡ ಮಾಡಿದರೆ ನಾನು ಧರಣಿ ಮಾಡ್ತೇನೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ –ಕುಜ ದೋಷವೇ ಮದುವೆಗೆ ಅಡ್ಡಿ – ಮಹಿಳಾ ಪೊಲೀಸ್ ಆತ್ಮಹತ್ಯೆ

ಜಾತಿಗೆ ಅಪಮಾನ ಮಾಡುವ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಜಾತಿ ನಿಂದನೆ, ದಲಿತ ವಿರೋಧಿ ಕೇಸ್ ದಾಖಲಿಸಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!