December 22, 2024

Newsnap Kannada

The World at your finger tips!

modi

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

Spread the love

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ ಕರ್ನಾಟಕ ಪ್ರದೇಶದ 14 ಕ್ಷೇತ್ರದಲ್ಲಿ ಎರಡನೇ ಹಂತದ ಮತದಾನವು ನಡೆಯಲಿದೆ.

ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್‌ ಪಕ್ಷಗಳ ಬಹುತೇಕ ನಾಯಕರು ಬೀಡುಬಿಟ್ಟಿದ್ದು ,ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದ್ದಾರೆ.

ಈ ಹಿನ್ನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಏಪ್ರಿಲ್‌ 28) ಮತ್ತು ಸೋಮವಾರ (ಏಪ್ರಿಲ್‌ 29) ಪ್ರಚಾರ ಕೈಗೊಳ್ಳಲಿದ್ದಾರೆ.

ನಿನ್ನೆರಾತ್ರಿ 10 ಗಂಟೆಗೆ ನರೇಂದ್ರ ಮೋದಿ ಅವರು ಬೆಳಗಾವಿಗೆ ಆಗಮಿಸಿದ್ದು ,ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಮೋದಿ ಅವರನ್ನು ಸ್ವಾಗತಿಸಲು ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಅವಕಾಶ ಮಾಡಿಕೊಡಲಾತ್ತು.

ಇಂದು ( ಏಪ್ರಿಲ್‌ 28 ) ಎಲ್ಲೆಲ್ಲಿ ರ‍್ಯಾಲಿ ?

ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು ,ಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ , ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ನಾಳೆಯ ( ಏಪ್ರಿಲ್‌ 29 ) ಸಮಾವೇಶ

ನರೇಂದ್ರ ಮೋದಿ ಅವರು ಬಳ್ಳಾರಿಯಲ್ಲಿ ಪ್ರಚಾರ ಮುಗಿಸಿ ,ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಸಿದ್ಧವಾಗಿದೆ.ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೋದಿ ಅಭಿಮಾನಿಗಳು ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಸಾಕಷ್ಟು ಸಂಖ್ಯೆಯಲ್ಲಿದ್ದು , ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು .

Copyright © All rights reserved Newsnap | Newsever by AF themes.
error: Content is protected !!