- ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮ
- ಸತತ 3ನೇ ಬಾರಿ ಪ್ರಧಾನಮಂತ್ರಿಯಾಗಿ ಮೋದಿ ಅವರ ಪದಗ್ರಹಣ
- ದೇಶ, ವಿದೇಶದ ಸಾವಿರಾರು ಗಣ್ಯರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಸತತ 3ನೇ ಬಾರಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಈಶ್ವರನ ಹೆಸರಿನಲ್ಲಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನೂತನ ಸರ್ಕಾರದ ಪದಗ್ರಹಣ ಸಮಾರಂಭ ನಡೆಯುತ್ತಿದೆ.
ರಾಷ್ಟ್ರಪತಿ ದೌಪ್ರದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ, ಪ್ರಧಾನಿ ಅವರ ಜೊತೆ ನೂತನ ಕೇಂದ್ರ ಸಚಿವರ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ.
ಮೋದಿ ರಾಜಕೀಯ ಹಾದಿ
- 1971 ಆರ್ಎಸ್ಎಸ್ ಕಾರ್ಯಕರ್ತರಾಗಿ ಸೇರ್ಪಡೆಯಾಗಿ ಕಾರ್ಯ
- 1974 ಗುಜರಾತ್ನಲ್ಲಿ ಭ್ರಷ್ಟಾಚಾರದ ವಿರುದ್ಧ ದೊಡ್ಡ ಹೋರಾಟ
- 1975 ಗುಜರಾತ್ ಲೋಕ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
- 1987 ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ನರೇಂದ್ರ ಮೋದಿ
- 1988 ಗುಜರಾತ್ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
- 1995 ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
- 2001 ಅ. 7 ಗುಜರಾತ್ನ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿ ಆಯ್ಕೆ
- 2002 ಫೆ. 24 ವಿಧಾನಸಭಾ ಉಪಚುನಾವಣೆಯಲ್ಲಿ ಮೋದಿಗೆ ಗೆಲುವು
- 2002 ಡಿ. 22 ಎರಡನೇ ಬಾರಿಗೆ ಪೂರ್ಣಾವಧಿ ಸಿಎಂ ಆಗಿ ಆಯ್ಕೆ
- 2007 ಡಿ.23 ಮೂರನೇ ಭಾರಿ ಗುಜರಾತ್ನ ಸಿಎಂ ಆಗಿ ಮೋದಿ ಆಯ್ಕೆ
- 2012 ಡಿ..20 ಸತತ ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿ ಮೋದಿ ಆಯ್ಕೆ
- 2014 ಮೇ 26 ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಮೋದಿ
- 2019 ಮೇ 30 ಎರಡನೇ ಬಾರಿ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ
- 2024 ಜೂ.4 ಮೋದಿ ನೇತೃತ್ವದ ಎನ್ಡಿಎಗೆ ಮತ್ತೊಮ್ಮೆ ಸಿಕ್ಕ ಬಹುಮತ
- 2024 ಜೂ.9 ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ