ನಟ ಕೋಮಲ್ ಕಮಾರ್ ಮತ್ತು ‘ಅಯೋಗ್ಯ’ ಚಿತ್ರದ ನಿರ್ಮಾಪಕ ಟಿಆರ್ ಚಂದ್ರಶೇಖರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಬರುತ್ತಿರುವುದು ತಿಳಿದಿರುವ ವಿಚಾರ. ‘ಮಜಾ ಟಾಕೀಸ್’ ನ ರಾಜಶೇಖರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಕೋಮಲ್ ಮುಂದಿನ ಸಿನಿಮಾ ಹೆಸರೇನು ಎಂಬುದನ್ನು ಅಕ್ಟೋಬರ್ 30ರಂದು ಅನಾವರಣ ಮಾಡಲಾಗುವುದು.
ನರೇಂದ್ರ ಮೋದಿ, ಕರ್ನಾಟಕ ಸಿಎಂ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಚ್‌ಡಿ ಕುಮಾರಸ್ವಾಮಿ ಅವರಂತೆ ಇರುವ ಪಾತ್ರಧಾರಿಗಳನ್ನು ಬಳಸಿಕೊಂಡು ”ಅಕ್ಟೋಬರ್ 30ರಂದು ಟೈಟಲ್ ತಿಳಿಸಲಾಗುವುದು” ಎಂದು ಪ್ರಚಾರ ಮಾಡಿದೆ. ಚಿತ್ರತಂಡದ ಈ ಹೊಸ ಪ್ರಯತ್ನಕ್ಕೆ ಚಿತ್ರರಸಿಕರು ಸಹ ಮೆಚ್ಚುಗೆಗೆ ವ್ಯಕ್ತಪಡಿಸಿದ್ದಾರೆ.
‘ರಾಬರ್ಟ್’ ಚಿತ್ರಕ್ಕೆ ಸಂಭಾಷಣೆ ಬರೆದಿರುವ ರಾಜಶೇಖರ್ ಅವರು ಕೋಮಲ್ ಜೊತೆ ತಮ್ಮ ಮೊದಲ ಸಿನಿಮಾ ಮಾಡುತ್ತಿದ್ದಾರೆ.
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ