ಅನೇಕಲ್ ಹೊರವಲಯದಲ್ಲಿರುವ ಗ್ರೀನ್ ವ್ಯಾಲಿ ರೆಸಾರ್ಟ್ ನಲ್ಲಿ ಮಧ್ಯರಾತ್ರಿ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಗಾಂಜಾ, ಮರಿಜುವಾನ ಸೇರಿದಂತೆ ವಿವಿಧ ಡ್ರಗ್ಸ್ ಪತ್ತೆಯಾಗಿವೆ.
ಅರ್ಧಂಬಂರ್ಧ ಬಟ್ಟೆ ಹಾಕಿದ್ದ ಯುವತಿಯರು, ವಿದ್ಯಾರ್ಥಿಗಳು ಡ್ರಗ್ಸ್ ನಶೆಯಲ್ಲಿ ತೇಲುತ್ತಿದ್ದರು. ಈ ವೇಳೆ ದಾಳಿ ಮಾಡಿದವರು 11 ಮಂದಿ ಯುವಕ – ಯುವತಿಯರನ್ನು ಬಂಧಿಸಿದ್ದಾರೆ.
ನಗರದ ಹೊರ ವಲಯದ ಆನೇಕಲ್ ಬಳಿಯ ತಮ್ಮನಾಯಕನಹಳ್ಳಿ ಸಮೀಪವಿರುವ ಹಸಿರು ವ್ಯಾಲ್ಯೂ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ಎಗ್ಗಿಲದೇ ನಡೆಯುತ್ತಿದೆ.
ಗಾಂಜಾ ಸೇರಿದಂತೆ ವಿವಿಧ ಡ್ರಗ್ಸ್ ಸೇವಿಸಿ, ತುಂಡುಡುಗೆ ತೊಟ್ಟು ಮಹಿಳೆಯರು ಹುಚ್ಚೆದ್ದು ಕುಣಿದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಆನೇಕಲ್ ಪೊಲೀಸರು, 11 ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಮತ್ತೆ 9 ಜನರನ್ನು ಬಂಧಿಸಿದ್ದು, ಒಟ್ಟು 20 ಜನರನ್ನು ಹೆಡೆಮುರಿ ಕಟ್ಟಿದ್ದಾರೆ. 6 ಕಾರು ಸೇರಿದಂತೆ 15ಕ್ಕೂ ಹೆಚ್ಚು ಬೈಕ್‍ಗಳನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಎಂಟ್ರಿ ಕೊಡುತ್ತಿದ್ದ ಹಾಗೆ ಎದ್ನೋ ಬಿದ್ನೋ ಅಂತ ಯುವಕ ಯುವತಿಯರು ಓಡಿಹೋಗಿದ್ದಾರೆ. ಡ್ರಗ್ಸ್ ಸೇವಿಸಿ ಅರೆ ನಗ್ನ ಸ್ಥಿತಿಯಲ್ಲಿದ್ದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳದ ವಿದ್ಯಾರ್ಥಿಗಳು, ಶ್ರೀಮಂತರ ಮಕ್ಕಳು ಈ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
ಮುಡಾ ಹಗರಣ: ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ತನಿಖಾ ವರದಿ ಆಧರಿಸಿ ಸರ್ಕಾರದ ಕ್ರಮ