ನ್ಯಾಷನಲ್‌ ಹೆರಾಲ್ಡ್‌ ಆರ್ಥಿಕ ಅವ್ಯವಹಾರ: ಇಂದು ಇಡಿ ಮುಂದೆ ಸೋನಿಯಾ ಹಾಜರ್

Team Newsnap
1 Min Read

ನ್ಯಾಷನಲ್‌ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ದೆಹಲಿಯ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ಮುಂದೆ ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಹುಲ್ ಗಾಂಧಿ 5 ದಿನಗಳ ವಿಚಾರಣೆ ಎದುರಿಸಿದ್ದರು. ಸೋನಿಯಾಗಾಂಧಿ ಅವರಿಗೂ ವಿಚಾರಣೆ ಬರುವಂತೆ 2 ಬಾರಿ ಸಮನ್ಸ್ ನೀಡಲಾಗಿತ್ತು.

ಕೋವಿಡ್ ಸೇರಿದಂತೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿನ್ನೆಲೆ ವಿಚಾರಣೆ ಮುಂದೂಡಲು ಸೋನಿಯಾಗಾಂಧಿ ಮನವಿ ಮಾಡಿದ್ದರು. ಇದಕ್ಕೆ ಸಹಕರಿಸಿದ್ದ ಅಧಿಕಾರಿಗಳು ಇಂದಿಗೆ ದಿನಾಂಕ ನಿಗದಿ ಮಾಡಿದ್ದರು.ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್

ಸೋನಿಯಾ ನಿರ್ದೇಶನದಂತೆ ಅಸೋಸಿಯೇಟೆಡ್ ಜರ್ನಲ್ಸ್ ಲಿ. ಯಂಗ್ ಇಂಡಿಯಾ ಖರೀದಿ ನಡೆದಿದೆ. ವ್ಯವಹಾರಗಳ ಪ್ರತಿ ಹಂತದಲ್ಲೂ ಸೋನಿಯಾಗಾಂಧಿ ಉಪಸ್ಥಿತಿ ಇದ್ದು. ರಾಹುಲ್ ಗಾಂಧಿಗೆ ಹಳೆ ವ್ಯವಹಾರಗಳ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಸೋನಿಯಾಗಾಂಧಿ ಹೇಳಿಕೆಯಿಂದ ಪ್ರಕರಣಕ್ಕೆ ಹೊಸ ತಿರುವು ಸಿಗುವ ಸಾಧ್ಯತೆಯಿದೆ.

ಕಾಂಗ್ರೆಸ್‌ ಪ್ರತಿಭಟನೆ :

ಈ ನಡುವೆ ಸೋನಿಯಾಗಾಂಧಿ ವಿಚಾರಣೆ ಖಂಡಿಸಿ ದೆಹಲಿ, ಬೆಂಗಳೂರು ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ.

ರಾಹುಲ್ ವಿಚಾರಣೆ ವೇಳೆ ನಡೆಸಿದ ಪ್ರತಿಭಟನೆ ಮಾದರಿಯಲ್ಲಿ ಇವತ್ತೂ ಬೀದಿಗಿಳಿಯಲು ಪಕ್ಷ ತೀರ್ಮಾನಿಸಿದೆ. ದೆಹಲಿಯಲ್ಲಿ ಭಾರೀ ಹೈಡ್ರಾಮಾ ನಡೆಯುವ ಸಾಧ್ಯತೆ ಇದೆ.

Share This Article
Leave a comment