ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ : ಜಯರಾಮು ನೇತೃತ್ವದಲ್ಲಿ ಕರವೇ ಪ್ರತಿಭಟನೆ

Team Newsnap
1 Min Read

ಬೆಂಗಳೂರು ಮೈಸೂರು ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ನಿರ್ಮಾಣ ವಿರೋಧಿಸಿ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಶನಿವಾರ ಅಧ್ಯಕ್ಷ H D ಜಯರಾಂ ನೇತೃತ್ವದಲ್ಲಿ ಪ್ರತಿಭಟನೆಯ ಮಾಡಿ ಹೆದ್ದಾರಿ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದರು. ಚಿನ್ನದ ವ್ಯಾಪಾರಿ ಜಗನ್ನಾಥ್ ಶೆಟ್ಟಿಗೆ ಯುವತಿ ಜೊತೆ ಖೆಡ್ಡಾ ತೋಡಿದ್ದೇ ಸಲ್ಮಾ ಬಾನು: ಮೋಸದ ವಿಡಿಯೋ ?

ಪ್ರತಿಭಟನೆಯ ಒತ್ತಾಯಗಳು :

  1. ಉಮ್ಮಡಹಳ್ಳಿ ಗೇಟ್ ಬಳಿ ಸರ್ವಿಸ್ ರಸ್ತೆ ನಿರ್ಮಿಸಬೇಕು
  2. ಗುಣಮಟ್ಟದ ಕಾಮಗಾರಿಯಲ್ಲಿ ಟೋಲ್ ರಸ್ತೆ ಹಾಗೂ ಸರ್ವಿಸ್ ರಸ್ತೆ ನಿರ್ಮಿಸಬೇಕು
  3. ಬೆಂಗಳೂರು ಮೈಸೂರು ರಸ್ತೆಯುದ್ದಕ್ಕು ಬರುವ ಗ್ರಾಮಗಳ ಗ್ರಾಮಸ್ಥರಿಗೆ ಈ ರಸ್ತೆ ಬಳಕೆಗೆ ಯಾವುದೆ ಟೋಲ್ ವಿಧಿಸಬಾರದು
  4. ಹೆದ್ದಾರಿ ನಿರ್ಮಾಣದ ಹೆಸರಿನಲ್ಲಿ ಇದೊಂದು ಬಹುಸಾವಿರ ಕೋಟಿ ಹಗರಣವಾಗಿದ್ದು ಇಡೀ ಯೋಜನೆಯ ಪ್ರಕ್ರಿಯೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು
  5. ಯೋಜನೆಯ ಮೂಲನಕ್ಷೆ ಹಾಗೂ ಯೋಜನೆಯ ವಿವರಗಳ ಕಾಮಗಾರಿಗಳ ವಿವರವಾದ ನಾಮಫಲಕವನ್ನು ಕಾಮಗಾರಿ ಸ್ಥಳಗಳಲ್ಲಿ ನಿಯಮಾನುಸಾರ ಪ್ರಕಟಿಸಬೇಕು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಡಿಬಿಎಲ್ ಕಂಪನಿಯ ಜತೆಗಿನ ಒಪ್ಪಂದ ಬಹಿರಂಗಪಡಿಸಬೇಕು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ತಹಶೀಲ್ದಾರ್ ಮಹಮ್ಮದ್ ಕುಂಞ, ಜಿಲ್ಲಾಧಿಕಾರಿಗಳು ಹಾಗೂ ಡಿಬಿಎಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದಾಗಿ ಭರವಸೆ ನೀಡಿದರು

Share This Article
Leave a comment