ಉಕ್ರೇನ್ನಲ್ಲಿ ಮೃತಪಟ್ಟಿರುವ ರಾಜ್ಯದ ಚಳಗೇರಿ ವಿದ್ಯಾರ್ಥಿ ನವೀನ್ ಮೃತದೇಹವನ್ನು, ಭಾರತಕ್ಕೆ ಕರೆತರುವ ವಿಚಾರಕ್ಕೆ ವಿದೇಶಾಂಗ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹಾವೇರಿ ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ.
ದೆಹಲಿಯಲ್ಲಿ ಸಂಸದ ಶಿವಕುಮಾರ್ ಉದಾಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿನ್ನೆ ನವೀನ್ ಕುಟುಂಬವನ್ನು ಭೇಟಿ ಮಾಡಿದ್ದೆ. ನವೀನ್ ಮೃತ ದೇಹವನ್ನು ಭಾರತಕ್ಕೆ ತರಲು ಮನವಿ ಮಾಡಿದ್ದಾರೆ.
ಬುಧವಾರ ವಿದೇಶಾಂಗ ಸಚಿವರನ್ನು ಕೂಡ ಭೇಟಿ ಮಾಡಿ ಮನವಿ ಮಾಡಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂಧಿಸಿದ್ದು, ಉಕ್ರೇನ್ ಮತ್ತು ರಷ್ಯಾ ಎರಡು ಕಡೆಯಿಂದಲೂ ಪ್ರಯತ್ನ ಮಾಡುವ ಭರವಸೆ ನೀಡಿದ್ದಾರೆ ಎಂದಿದ್ದಾರೆ.
ಈಗಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಮೃತದೇಹವನ್ನು ಹೇಗೆ ತರಬಹುದು ಎಂದು ರಾಯಭಾರಿ ಕಚೇರಿ ಜೊತೆಗೆ ಚರ್ಚೆ ಮಾಡಿದ್ದಾರೆ. ಒಂದೇರಡು ದಿನಗಳಲ್ಲಿ ಮೃತ ದೇಹವನ್ನು ತರುವ ನಿರೀಕ್ಷೆಗಳಿದೆ. ನವೀನ್ಗೆ ಮೆಟಲ್ ಬಡಿದು ಸಾವು ಸಂಭವಿಸಿರುವ ಸಾಧ್ಯತೆ ಇದೆ.
ಬಾಂಬ್ ಬಿದ್ದಿದ್ದರೇ ದೇಹದ ಅವಶೇಷಗಳು ದೊರಕುತ್ತಿರಲಿಲ್ಲ.
ಸ್ಫೋಟದ ತೀವ್ರತೆಯಿಂದ ಯಾವುದಾದರೂ ಮೆಟಲ್ ನಿಂದ ಪೆಟ್ಟು ಬಿದ್ದಿರುವ ಸಾಧ್ಯತೆ ಇದೆ ಎಂದು ಉದಾಸಿ ಹೇಳಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ