ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ದೊಡ್ಡ ದಾಳಿಯಲ್ಲಿ 20 ಯೋಧರು ಹುತಾತ್ಮರಾಗಿದ್ದಾರೆ.
ಪ್ರತೀಕಾರವಾಗಿ ನಡೆದ ಗುಂಡಿನ ದಾಳಿಯಲ್ಲಿ 15 ನಕ್ಸಲೀಯರನ್ನೂ ಕೂಡ ಹತ್ಯೆ ಮಾಡಲಾಗಿದೆ.
ಭದ್ರತಾಪಡೆಗಳು ಹಾಗೂ ನಕ್ಸಲರ ನಡುವೆ ಒಟ್ಟು 4 ಗಂಟೆಗಳ ಕಾಲ ನಡೆದ ಗುಂಡಿನ ಕಾಳಗದಲ್ಲಿ 20 ಜನ ಯೋಧರು ಹುತಾತ್ಮರಾಗಿದ್ದಾರೆ. ಯೋಧರ ಮೃತದೇಹಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದೆ. ಕಾರ್ಯಾಚರಣೆ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ಆಗಮಿಸಿದ್ದು ನಾಪತ್ತೆಯಾಗಿರುವ ಯೋಧರಿಗಾಗಿ ತೀವ್ರ ಹುಡುಕಾಟ ಆರಂಭಿಸಿದೆ.
ಛತ್ತೀಸ್‍ಗಢದ ಟರ್ರೆಮ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಬಿಡುಬಿಟ್ಟಿರುವ ಕುರಿತು ಮಾಹಿತಿ ಕಲೆಹಾಕಿದ್ದ ನಕ್ಸಲ್ ನಿಗ್ರಹ ಪಡೆ ಸಿಆರ್‍ಪಿಎಫ್ ನೊಂದಿಗೆ ಜಂಟಿ ಕಾರ್ಯಾಚರಣೆಗೆ ನಡೆಸಿತ್ತು.
ಸಿಆರ್‍ಪಿಎಫ್‍ನ ಕೋಬ್ರಾ ತಂಡ ಮತ್ತು ಜಿಲ್ಲಾ ಮೀಸಲು ಸಶಸ್ತ್ರಪಡೆ ಜಂಟಿ ಕಾರ್ಯಾಚರಣೆಗಿಳಿದು, ನಕ್ಸಲರ ಅಡಗುತಾಣದ ಮೇಲೆ ಶನಿವಾರ ದಾಳಿ ನಡೆಸಿದೆ. ಈ ವೇಳೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ನಿನ್ನೆ ನಡೆದ ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ 23 ಮಂದಿ ಯೋಧರನ್ನು ಬಿಜಾಪುರ ಆಸ್ಪತ್ರೆಗೆ ಹಾಗೂ 7 ಮಂದಿಯನ್ನು ರಾಯ್‍ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್