ಛತ್ತೀಸ್‍ಗಢನಲ್ಲಿ ನಕ್ಸಲ್ ದಾಳಿ 20 ಯೋಧರು ಹುತಾತ್ಮ : 15 ನಕ್ಸಲೀಯರೂ ಹತ್ಯೆ

Team Newsnap
1 Min Read

ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ದೊಡ್ಡ ದಾಳಿಯಲ್ಲಿ 20 ಯೋಧರು ಹುತಾತ್ಮರಾಗಿದ್ದಾರೆ.
ಪ್ರತೀಕಾರವಾಗಿ ನಡೆದ ಗುಂಡಿನ ದಾಳಿಯಲ್ಲಿ 15 ನಕ್ಸಲೀಯರನ್ನೂ ಕೂಡ ಹತ್ಯೆ ಮಾಡಲಾಗಿದೆ.

ಭದ್ರತಾಪಡೆಗಳು ಹಾಗೂ ನಕ್ಸಲರ ನಡುವೆ ಒಟ್ಟು 4 ಗಂಟೆಗಳ ಕಾಲ ನಡೆದ ಗುಂಡಿನ ಕಾಳಗದಲ್ಲಿ 20 ಜನ ಯೋಧರು ಹುತಾತ್ಮರಾಗಿದ್ದಾರೆ. ಯೋಧರ ಮೃತದೇಹಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದೆ. ಕಾರ್ಯಾಚರಣೆ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ಆಗಮಿಸಿದ್ದು ನಾಪತ್ತೆಯಾಗಿರುವ ಯೋಧರಿಗಾಗಿ ತೀವ್ರ ಹುಡುಕಾಟ ಆರಂಭಿಸಿದೆ.

ಛತ್ತೀಸ್‍ಗಢದ ಟರ್ರೆಮ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಬಿಡುಬಿಟ್ಟಿರುವ ಕುರಿತು ಮಾಹಿತಿ ಕಲೆಹಾಕಿದ್ದ ನಕ್ಸಲ್ ನಿಗ್ರಹ ಪಡೆ ಸಿಆರ್‍ಪಿಎಫ್ ನೊಂದಿಗೆ ಜಂಟಿ ಕಾರ್ಯಾಚರಣೆಗೆ ನಡೆಸಿತ್ತು.

ಸಿಆರ್‍ಪಿಎಫ್‍ನ ಕೋಬ್ರಾ ತಂಡ ಮತ್ತು ಜಿಲ್ಲಾ ಮೀಸಲು ಸಶಸ್ತ್ರಪಡೆ ಜಂಟಿ ಕಾರ್ಯಾಚರಣೆಗಿಳಿದು, ನಕ್ಸಲರ ಅಡಗುತಾಣದ ಮೇಲೆ ಶನಿವಾರ ದಾಳಿ ನಡೆಸಿದೆ. ಈ ವೇಳೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ನಿನ್ನೆ ನಡೆದ ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ 23 ಮಂದಿ ಯೋಧರನ್ನು ಬಿಜಾಪುರ ಆಸ್ಪತ್ರೆಗೆ ಹಾಗೂ 7 ಮಂದಿಯನ್ನು ರಾಯ್‍ಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article
Leave a comment