ಮಳೆಯಿಂದ ಪ್ರಾಣ ಹಾನಿ ತಡೆಗೆ ಅಗತ್ಯ ಕ್ರಮ- ಸಿದ್ದು

Team Newsnap
2 Min Read
Necessary action to prevent loss of life due to rain - Siddu ಮಳೆಯಿಂದ ಪ್ರಾಣ ಹಾನಿ ತಡೆಗೆ ಅಗತ್ಯ ಕ್ರಮ- ಸಿದ್ದು
  • ಮಳೆ ಹಾನಿ- ಸಿಎಂ ಸಿದ್ದು ವೀಡಿಯೋ ಕಾನ್ಫರೆನ್ಸ್

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳೊಂದಿಗೆ ರಾಜ್ಯದ ಹವಾಮಾನ, ಮಳೆ- ಬೆಳೆ ಸಂಬಂಧಿತ ಸ್ಥಿತಿಗತಿಗಳ ಕುರಿತು ಪರಿಶೀಲಿಸಲು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.

ಈ ಸಭೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಆಗಿರುವ ಮಳೆಯ ಪ್ರಮಾಣ, ಹಾನಿ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.

ಹವಾಮಾನ ಇಲಾಖೆಯಿಂದ ಮಳೆಯ ಪ್ರಮಾಣದ ಬಗ್ಗೆ ಮಾಹಿತಿ ಇರುತ್ತದೆ. ಈ ಮಾಹಿತಿ ಆಧರಿಸಿ ಮಳೆ ಹಾನಿಯಿಂದ ಆಗುವ ಪ್ರಾಣ ಹಾನಿಯನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಿ, ಜಲಪಾತಗಳು, ಜಲಾವೃತ ಆಗಿರುವ ಸೇತುವೆಗಳ ಬಳಿ ಹಾಗೂ ನದಿಗಳ ಬಳಿ ಜನರು ಹೋಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಸಾವು ನೋವುಗಳು ಸಂಭವಿಸದಂತೆ ತಡೆಗಟ್ಟಲು ಎಲ್ಲಾ ರೀತಿಯ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಿ ಎಂದು ಸೂಚಿಸಿದರು.

WhatsApp Image 2023 07 26 at 7.14.04 PM 1

ಪ್ರವಾಹ ಉಂಟಾಗಬಹುದಾದ ಗ್ರಾಮದ ಜನರನ್ನು ಕಾಳಜಿ ಕೇಂದ್ರಗಳಿಗೆ ಶಿಪ್ಟ್ ಮಾಡಿ. ಪದೆ ಪದೆ ಪ್ರವಾಹ ಬರುವ ಗ್ರಾಮಗಳನ್ನು ಗುರುತಿಸಿ, ಆ ಗ್ರಾಮಗಳನ್ನು ಶಿಫ್ಟ್ ಮಾಡಿ ಅವರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಇರುವ ಕ್ರಮಗಳನ್ನು ಗುರುತಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ಜಿಲ್ಲೆಯಲ್ಲಿಯೂ ವಾರ್ ರೂಂ ತೆರೆದು ಸಹಾಯವಾಣಿ ತೆರೆಯಬೇಕು. ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ರೈತರ ಆತ್ಮ ಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸರಾಸರಿ 20 ಕೋಟಿ ಅನುಧಾನ ಇದ್ದು ಅಗತ್ಯ ಇರುವ ಕಡೆ ಬಳಸಿ. ಮಳೆಯಿಂದ ಪ್ರಾಣ ಹಾನಿ, ಮನೆ ಹಾನಿ ಉಂಟಾಗಿರುವ ವವರಿಗೆ ಪರಿಹಾರ ವಿತರಣೆ ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಕೊರತೆಯಾಗದಂತೆ ವಿತರಣೆ ಮಾಡಬೇಕು.

ಉಪಮುಖ್ಯಮಂತ್ರಿ ಗಳಾದ ಡಿ ಕೆ ಶಿವಕುಮಾರ್ ಅವರು ಮಾತನಾಡಿ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ವಾಸ ಮಾಡಬೇಕು. ತುರ್ತು ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ದೊರೆಯುವಂತೆ ಇರಬೇಕು. ಶಾಲಾ ಅಂಗನವಾಡಿ ಕಟ್ಟಡಗಳು ಸೋರುವಂತೆ ಇದ್ದರೆ ಗುರ್ತಿಸಿ ಎಸ್ ಡಿ ಆರ್ ಎಫ್ ಅನುದಾನದಲ್ಲಿ ರಿಪೇರಿ ಮಾಡಿ ಎಂದು ಸೂಚನೆ ನೀಡಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ ಹವಾಮಾನ ಇಲಾಖೆಯ ವರದಿಯ ಪ್ರಕಾರ ಜುಲೈ 29 ರವರಿಗೆ ಉತ್ತಮ ಮಳೆಯಾಗುತ್ತದೆ. ಆಗಸ್ಟ್ ತಿಂಗಳಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದೆ ಪ್ರತಿದಿನ ರಾಜ್ಯದಲ್ಲಿ ಸರಾಸರಿ 42 ಟಿಎಂಸಿ ನೀರು ಜಲಾಶಯಗಳಲ್ಲಿ ಶೇಖರಣೆ ಆಗುತ್ತಿದೆ ಎಂದರು.

WhatsApp Image 2023 07 26 at 7.14.05 PM

ರಾಜ್ಯದಲ್ಲಿ ಜೂನ್ 01 ರಿಂದ ಇಲ್ಲಿಯವರೆಗೆ 48 ಮಾನವ ಜೀವ ಹಾನಿ ಆಗಿದೆ. 35 ಜನರು ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣ ವಾಗಿ 57 ಮನೆಗಳು, ತೀವ್ರವಾಗಿ 208 ಹಾಗೂ 2682 ಮನೆಗಳು ಭಾಗಶಃ ಹಾನಿಗೊಂಡಿವೆ ಎಂದು ಮಾಹಿತಿ ನೀಡಿದರು.ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ : ಸ್ಪೀಕರ್ ಅಂಗೀಕಾರ

ಸಭೆಯಲ್ಲಿ ವಿವಿಧ ಇಲಾಖೆಗಳ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2023 07 21 at 9.21.34 PM
Share This Article
Leave a comment