December 29, 2024

Newsnap Kannada

The World at your finger tips!

sudhakar1

ಡಿ. 20 ರಿಂದ ಜ. 2 ರವರೆಗೆ ತೀವ್ರ ಕಟ್ಟೆಚ್ಚರ : ಸಚಿವ ಡಾ.ಕೆ.ಸುಧಾಕರ್

Spread the love
  • ಜನವರಿ ಅಥವಾ ಫೆಬ್ರವರಿಯಲ್ಲಿ ಕೋವಿಡ್ 2 ನೇ ಅಲೆ ಬರುವ ಸಾಧ್ಯತೆ
  • ಮುಂದಿನ 45 ದಿನಗಳು ನಿರ್ಣಾಯಕ

ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಕೋವಿಡ್ ಎರಡನೇ ಅಲೆ ಬರುವ ಸಾಧ್ಯತೆ ನಿಚ್ಚಳವಾಗಿದೆ. ಡಿಸೆಂಬರ್ 20 ರಿಂದ ಜನವರಿ 2 ರವರೆಗೆ 15 ದಿನಗಳ ಕಾಲ ತೀವ್ರ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಾರ್ವಜನಿಕರಲ್ಲಿ ಮನವಿ
ಮಾಡಿದ್ದಾರೆ.

ಕೋವಿಡ್ 2 ನೇ ಅಲೆಗೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಚಿವರು ವಿಧಾನಸೌಧದಲ್ಲಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಡಿಸೆಂಬರ್, ಜನವರಿ, ಫೆಬ್ರವರಿ ತಿಂಗಳು ಚಳಿಗಾಲದ ಅವಧಿಯಾಗಿದೆ. ಮುಂದಿನ 45 ದಿನ ನಿರ್ಣಾಯಕ ಹಂತವಾಗಿದೆ. ಬೇರೆ ದೇಶಗಳಲ್ಲಾಗಿರುವ ಪರಿಸ್ಥಿತಿಯನ್ನು ಅವಲೋಕಿಸಿದಾಗ 45 ರಿಂದ 90 ದಿನದೊಳಗೆ ಎರಡನೇ ಅಲೆ ಬರುತ್ತದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲೂ ಕೋವಿಡ್ 2 ನೇ ಅಲೆ ಬರುವ ಸಾಧ್ಯತೆ ಇದೆ ಎಂದು ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದೆ, ಈ ಕುರಿತು ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಜನರ ನಿಯಂತ್ರಣ:

ಈ 15 ದಿನಗಳ ಅವಧಿಯಲ್ಲಿ ಸಭೆ, ಸಮಾರಂಭಗಳಲ್ಲಿ ತೀವ್ರ ಎಚ್ಚರಿಕೆ ವಹಿಸಬೇಕು. ಮದುವೆ ಸಮಾರಂಭಕ್ಕೆ 100, ರಾಜಕೀಯ ಹಾಗೂ ಧಾರ್ಮಿಕ ಸಮಾರಂಭಕ್ಕೆ 200, ಅಂತ್ಯಕ್ರಿಯೆಯಲ್ಲಿ 50 ಕ್ಕಿಂತ ಹೆಚ್ಚು ಜನರ ಸೇರುವಂತಿಲ್ಲ ಎಂಬ ನಿಯಮ ಜಾರಿಯಲ್ಲಿದೆ. ಈ ನಿಯಮದೊಂದಿಗೆ ಮಾಸ್ಕ್ ಧರಿಸುವ, ಭೌತಿಕ ಅಂತರ ಕಾಯ್ದುಕೊಳ್ಳುವ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮುಖ್ಯವಾಗಿ ಜನರು ಗುಂಪುಗೂಡುವುದನ್ನು ನಿಯಂತ್ರಣಕ್ಕೆ ತರಬೇಕಿದೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಹೆಚ್ಚಿನ ಚರ್ಚೆ ನಡೆಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

sudhakar

ಹೊಸ ವರ್ಷಾಚರಣೆ ಅರ್ಥಹೀನ:

ಹೊಸ ವರ್ಷ ಭಾರತೀಯರಿಗೆ ಹಬ್ಬವಲ್ಲ. ಜನರು ಪ್ರಾಣ ಕಳೆದುಕೊಂಡಿದ್ದಾರೆ, ಉದ್ಯೋಗ ನಷ್ಟವಾಗಿದೆ, ಆರ್ಥಿಕ ಅಸ್ಥಿರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಹೊಸ ವರ್ಷಾಚರಣೆ ಮಾಡುವುದು ಅರ್ಥಹೀನ. ಜನರು ಜವಾಬ್ದಾರಿಯುತರಾಗಿ ನಿಯಮಗಳನ್ನು ಪಾಲಿಸಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ

ಸಚಿವರು ಹೇಳಿದ ಇತರೆ ಅಂಶಗಳು:

1)ಕೋವಿಡ್ ಚಿಕಿತ್ಸೆಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಸದಾ ಸಿದ್ಧ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದರೆ ಹಾಸಿಗೆ ಸಂಖ್ಯೆ ಹೆಚ್ಚಿಸುವಂತೆ ತಿಳಿಸಲಾಗಿದೆ.

2) ಫೆಬ್ರವರಿ ಅಂತ್ಯದವರೆಗೂ ಹೆಚ್ಚು ಕೋವಿಡ್ ಪರೀಕ್ಷೆ ನಡೆಸಬೇಕು. ನಿತ್ಯ 1 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ ಮಾಡಬೇಕೆಂದು ಸೂಚಿಸಲಾಗಿದೆ.

3) ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 3ನೇ ವಾರ ಸಭೆ ನಡೆಸಿ ತೀರ್ಮಾನ.

Copyright © All rights reserved Newsnap | Newsever by AF themes.
error: Content is protected !!