ಫೈನಲ್ ಪಂದ್ಯದಲ್ಲಿ 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ನೀರಜ್ ಚೋಪ್ರಾ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.
ಮೊದಲ ಸುತ್ತಿನಲ್ಲೇ ಫೌಲ್ ಮಾಡಿದ್ದ ನೀರಜ್ 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು.
ಪಾಕಿಸ್ತಾನದ ಅರ್ಷದ್ ನದೀಮ್ ಅವರು 87.82 ಮೀಟರ್ ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿದ್ದಾರೆ.ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ‘ನ್ಯೂಸ್ ಸ್ನ್ಯಾಪ್ ‘
2022ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರು. ಆದರೆ ಈ ಬಾರಿ ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು