ಕೋವಿಡ್ ಕಾರಣದಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET)ಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಇದೇ 14ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ನಡೆಯಲಿವೆ.
ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅಥವಾ ಕಂಟೈನ್ಮೆಂಟ್ ವಲಯದಲ್ಲಿದ್ದ ವಿದ್ಯಾರ್ಥಿಗಳು ಸೆಪ್ಟೆಂಬರ್‌ನಲ್ಲಿ ನಡೆದ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಅವಕಾಶ ವಂಚಿತ ವಿದ್ಯಾರ್ಥಿಗಳಿಗೆ ಮರುಪರೀಕ್ಷೆಯನ್ನು ನಿಗದಿ ಮಾಡಲಾಗಿದೆ.
ಇಂದು ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಾಲಯ, ಕೊರೋನಾ ಕಾರಣದಿಂದ ಸಿಇಟಿ ಬರೆಯಲಾಗದ ವಿದ್ಯಾರ್ಥಿಗಳಿಗೆ ಸರ್ಕಾರ ಅಕ್ಟೋಬರ್ 14ರಂದು ಪರೀಕ್ಷೆ ನಡೆಸಿ, ಅಕ್ಟೋಬರ್ 16 ರಂದು ಫಲಿತಾಂಶ ಪ್ರಕಟಿಸಬೇಕೆಂದು ಆದೇಶ ಹೊರಡಿಸಿದೆ. ಸೆಪ್ಟೆಂಬರ್ 13 ರಂದು ನಡೆದಿದ್ದ ಪರೀಕ್ಷೆಯಲ್ಲಿ ದೇಶದಾದ್ಯಂತ 3,843 ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ, 14 ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
More Stories
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ