ರಾಜ್ಯದಲ್ಲಿ ಮುಂದಿನ ವರ್ಷ ಕೆಲ ಶಾಲೆಗಳಲ್ಲಿ ಮಾತ್ರ NEP ಜಾರಿ: ಸಚಿವ ಬಿ.ಸಿ.ನಾಗೇಶ್

Team Newsnap
1 Min Read

ಮುಂದಿನ ವರ್ಷ ರಾಜ್ಯದ ಕೆಲವು ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೊಳಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಬೆಳಗಾವಿಯ ವಿಧಾನಸಭೆ ಅಧಿವೇಶನದಲ್ಲಿ ಮಹಾಂತೇಶ್ ಕೌಜಲಗಿ ಪ್ರಶ್ನೆಗೆ ಉತ್ತರಿಸಿದ ಸಚಿವ ನಾಗೇಶ್ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಪ್ರಕ್ರಿಯೆ ಈಗಾಗಲೇ ರಾಜ್ಯದಲ್ಲಿ ಚಾಲ್ತಿಯಲ್ಲಿದೆ. ಅನುಷ್ಠಾನ ಕಾರ್ಯಪಡೆಯ ಶಿಫಾರಸಿನಂತೆ ಹಂತ ಹಂತವಾಗಿ ಸಂಪೂರ್ಣ ಜಾರಿಗೊಳಿಸಲಾಗುವುದು.
ಪ್ರಾಥಮಿಕ ಹಂತದ ಶಿಕ್ಷಣ ಮಾತ್ರ ಆರಂಭಿಸುತ್ತೇವೆ ಎಂದರು

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಹಂತದಲ್ಲಿ ವಿವಿಧ ವಿಷಯಗಳು ಮತ್ತು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ಎನ್ ಇ ಪಿ ನೀತಿ ಏಕಾಏಕಿ ಜಾರಿಯಾದರೆ ಸಮಸ್ಯೆಯಾಗುತ್ತದೆ ಎಂದು ಕೌಜಲಗಿ ಮತ್ತೆ ಹೇಳಿ ಪೂರ್ವತಯಾರಿಯಿಲ್ಲದೆ ಆರಂಭ ಮಾಡುವುದು ಬೇಡ ಎಂದರು.

ಸಚಿವರು ಉತ್ತರಿಸಿ ಟಾಟಾ ಸಂಸ್ಥೆ ಮೂಲಕ ಈಗಾಗಲೇ ತರಬೇತಿ ಆರಂಭವಾಗಿದೆ. ತರಬೇತಿ ನೀಡದೇ NEP ಜಾರಿ ಮಾಡಲ್ಲ ಎಂದು ಭರವಸೆ ನೀಡಿದರು.

2030ರೊಳಗೆ NEP ಸಂಪೂರ್ಣವಾಗಿ ಜಾರಿಗೊಳಿಸಲು ಹೇಳಿದ್ದಾರೆ. ವಿವಿಧ ಕ್ಷೇತ್ರಗಳ ಪಾಲುದಾರರಿಗೆ NEP ಪರಿಚಯಿಸಿ ಅವರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಕುರಿತು ರಾಜ್ಯದ ಪ್ರಸ್ತುತ ಸ್ಥಿತಿ ಅವಲೋಕಿಸಲು ರಾಜ್ಯ ಶಿಕ್ಷಣ ಕ್ಷೇತ್ರದ ಪೊಸಿಷನ್ ಪೇಪರ್ ಸಿದ್ಧಪಡಿಸಲು ವಿವಿಧ ಸಮಿತಿ ರಚಿಸಲಾಗಿದೆ. ಇದು ಸಿದ್ಧಗೊಂಡ ಬಳಿಕ ಪಠ್ಯಕ್ರಮ ಹಾಗೂ ಪಠ್ಯಸೂಚಿ ರಚಿಸಲಾಗುವುದು ಎಂದು ಸಚಿವರು ಉತ್ತರಿಸಿದ್ದಾರೆ.

Share This Article
Leave a comment