November 23, 2024

Newsnap Kannada

The World at your finger tips!

Suresh Kumar

ಹಳ್ಳಿಗಾಡಿನ ಪ್ರದೇಶದಲ್ಲಿ ಆನ್​ಲೈನ್​​ ಕ್ಲಾಸ್​ಗೆ ನೆಟ್ವರ್ಕ್​ ಸಮಸ್ಯೆ: ಸಿಎಂಗೆ ಶಿಕ್ಷಣ ಸಚಿವರ ಪತ್ರ

Spread the love

ಗ್ರಾಮೀಣ ಭಾಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಇಂಟರ್​​ನೆಟ್​ ಸಮಸ್ಯೆ ಆಗುತ್ತದೆ. ಹೀಗಾಗಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಿಎಂಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಪತ್ರ ಬರೆದಿದ್ದಾರೆ.

ಗ್ರಾಮೀಣ ಪ್ರದೇಶದ ಮಕ್ಕಳು ಬೆಟ್ಟ-ಗುಡ್ಡಗಳನ್ನು ಹತ್ತಿ ಕುಳಿತು ಆನ್​ಲೈನ್​​​ ತರಗತಿಗೆ ಹಾಜರಾಗುತ್ತಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

ರಾಜ್ಯದಲ್ಲಿ ಮತ್ತೆ ಶೈಕ್ಷಣಿಕ ವರ್ಷ ಪುನರ್ ಆರಂಭವಾಗುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ನೆಟ್​ವರ್ಕ್ ಸಮಸ್ಯೆ ಉಂಟಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ.

ಇಂದಿನ ಪರಿಸ್ಥಿತಿಯಲ್ಲಿ ಆನ್​ಲೈನ್​ ಬೋಧನೆ ಅನಿವಾರ್ಯವಾಗಿದೆ. ಮಳೆಗಾಲವಾಗಿದ್ದರಿಂದ ಇನ್ನೂ ಗ್ರಾಮೀಣ ಭಾಗದಲ್ಲಿ ನೆಟ್​ವರ್ಕ್ ಸಮಸ್ಯೆ ಉಂಟಾಗಿದೆ. ಹೀಗಾಗಿ ನೆಟ್ವರ್ಕ್ ಆಪರೇಟರ್​​ಗಳ ಸಭೆ ನಡೆಸಿ ಪರಿಹಾರ ರೂಪಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!