ಏಪ್ರಿಲ್ ತಿಂಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣುವ ಸಾಧ್ಯತೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದು, ಬಿಜೆಪಿ ಹೈ ಕಮಾಂಡ್‍ನವರು ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರವರನ್ನು ಬದಲಾಯಿಸುವ ಬಗ್ಗೆ ಚಿಂತಿಸಿಲ್ಲ. ಇನ್ನು 2-3 ತಿಂಗಳ ಕಾಲ ಅವರ ಕಾರ್ಯವೈಖರಿಯನ್ನು ವೀಕ್ಷಿಸಲಿದ್ದಾರೆ. ಈಗ ಕೇಂದ್ರ ಸಚಿವ ಅಮಿತ್‍ಷಾರವರು ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಈಗ ಅವರು ಏಕಾಏಕಿ ಬಿಎಸ್‍ವೈರವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಸರ್ಕಾರ ನಡೆಯುವುದಾದರೂ ಹೇಗೆ? ಎಂದು ಪ್ರಶ್ನಿಸಿದರು
ನನಗೆ ಬಂದ ಮಾಹಿತಿಯಂತೆ ಮುಂದಿನ ಏಪ್ರಿಲ್‍ನಲ್ಲಿ ಬಿಎಸ್‍ವೈರವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ಖಚಿತ. ಹಾಗಾಗಿ ರಾಜ್ಯದ ಜನತೆ ಹೊಸ ಮುಖ್ಯಮಂತ್ರಿಯನ್ನು ಕಾಣಲಿದೆ ಎಂದರು
ಸಿಎಂ ವಿರುದ್ಧ ಸಿಡಿ ಬ್ಲಾಕ್ ಮೇಲ್ ಕುರಿತಂತೆ ಮಾತನಾಡಿದ ಸಿದ್ದು, ಸಿ ಡಿ ಯಲ್ಲಿ ಏನೇನ್ ಮಾಡಿದ್ದಾರೋ ಅನ್ನೊದು ಬಹಿರಂಗವಾಗಲಿ. ಎಲ್ಲವೂ ಗೊತ್ತಾಗಬೇಕು ಅಂದರೆ, ತನಿಖೆಯಾಗಬೇಕು. ಯಡಿಯೂರಪ್ಪ ಈ ವಯಸ್ಸಲ್ಲಿ ಏನೇನ್ ಮಾಡಿದ್ದಾನೋ ಯಾರಿಗೆ ಗೊತ್ತು? ಅದು ಅಸಹ್ಯವಾಗಿ ಬೇರೆ ಇದೆಯಂತಲ್ಲಪ್ಪ! ಅದು ಗೊತ್ತಾಗಬೇಕು ಅಲ್ಲವೇ? ಈ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಶರತ್ ಬಚ್ಚೆಗೌಡ ಕಾಂಗ್ರೆಸ್ ನಾಯಕರ ಭೇಟಿ ವಿಚಾರವಾಗಿ ಮಾತನಾಡಿ, ಗ್ರಾ.ಪಂ ಚುನಾವಣೆಯಲ್ಲಿ ನಮ್ಮ ಪಕ್ಷ ಮತ್ತು ಶರತ್ ಸೇರಿ ಚುನಾವಣೆ ನಡೆಸಿದ್ದಾರೆ. ಹೊಸಕೋಟೆ ಕ್ಷೇತ್ರದಲ್ಲಿ ಶೇ.70 ರಷ್ಟು ಬೆಂಬಲಿತರು ಗೆದ್ದಿದ್ದಾರೆ. ಈ ಹಿನ್ನಲೆ ನನಗೆ ಧನ್ಯವಾದ ಹೇಳುವುದಕ್ಕೆ ಬಂದಿದ್ದರು. ಶರತ್ ಬಚ್ಚೆಗೌಡ ಪಕ್ಷಕ್ಕೆ ಬರುವ ಬಗ್ಗೆ ಮಾತುಕತೆ ನಡಯುತ್ತಿದೆ. ಇನ್ನೊಂದು 15 ದಿನದಲ್ಲಿ ಈ ಈ ಬಗ್ಗೆ ತೀರ್ಮಾನವಾಗುತ್ತೆ ಎಂದು ತಿಳಿಸಿದ್ದಾರೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ