ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನೇಮಕವಾಗಿರುವ ರೋಹಿಣಿ ಸಿಂಧೂರಿಯವರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡರು.
ಮಂಗಳವಾರ ಬೆಳಿಗ್ಗೆ ಪತಿ ಸುಧೀರ್ ರೆಡ್ಡಿಯವರ ಜೊತೆ ಭೇಟಿ ನೀಡಿದ ರೋಹಿಣಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು
ದೇವಾಲಯದ ಮುಖ್ಯ ಅರ್ಚಕ ಶಶಿಶೇಖರ್ ದೀಕ್ಷಿತ್, ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಎನ್. ಎಸ್. ಯತಿರಾಜ್, ವ್ಯವಸ್ಥಾಪಕ ಗೋವಿಂದ ರಾಜ್ ಜಿಲ್ಲಾಧಿಕಾರಿಯವರನ್ನು ಸ್ವಾಗತಿಸಿದರು.
ನಂತರ ನೂತನ ಜಿಲ್ಲಾಧಿಕಾರಿ ಯಾಗಿ ಡಿಸಿ ಕಚೇರಿಯ ಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿ ಅದಕ್ಕೂ ಮುನ್ನ ಮಂಡ್ಯ ದಲ್ಲಿ ಜಿಪಂ ಸಿಇಓ ಆಗಿ ಸೇವೆ ಸಲ್ಲಿಸಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು