December 28, 2024

Newsnap Kannada

The World at your finger tips!

new cloth

ಭಾರತೀಯ ಸೇನೆಗೆ ಹೊಸ ಸಮವಸ್ತ್ರ ಅನಾವರಣ

Spread the love

ಭಾರತೀಯ ಯೋಧರಿಗಾಗಿಯೇ ತಯಾರಿಸಲಾದ ನೂತನ ಸಮವಸ್ತ್ರವನ್ನು ಸೇನಾ ದಿನದಂದು ಅನಾವರಣಗೊಳಿಸಲಾಯಿತು.

ಹಲವು ವಿಶೇಷತೆಗಳನ್ನು ಒಳಗೊಂಡ ಸೇನಾ ಸಮವಸ್ತ್ರವನ್ನು ಧರಿಸಿ ಪ್ಯಾರಾಚೂಟ್‌ ರೆಜಿಮೆಂಟ್‌ನ ಕಮಾಂಡೋಗಳ ತುಕಡಿ ಸೇನಾ ದಿನದ ಪಥಸಂಚನದಲ್ಲಿ ಭಾಗವಹಿಸಿತು.

ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫ್ಯಾಷನ್‌ ಟೆಕ್ನಾಲಜಿ (ಎನ್‌ಐಎಫ್‌ಟಿ) ಸಹಯೋಗದಲ್ಲಿ ಭಾರತ ಸೇನಾಪಡೆಯು ಹೊಸ ಸಮವಸ್ತ್ರವನ್ನು ವಿನ್ಯಾಸಗೊಳಿಸಲಾಗಿದೆ.

ಸೇನೆಗಾಗಿ ವಿನ್ಯಾಸಗೊಳಿಸಿರುವ ಹೊಸ ಸಮವಸ್ತ್ರ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಬ್ರಿಟಿಷ್‌ ಸೈನ್ಯವು ಬಳಸುವ ಮಾದರಿಯಂತೆ ಸಮವಸ್ತ್ರವನ್ನು ವಿನ್ಯಾಸಗೊಳಿಸಲಾಗಿದೆ. ವಿವಿಧ ದೇಶಗಳ ಸೇನಾ ಸಮವಸ್ತ್ರಗಳ ವಿಶ್ಲೇಷಣೆ ಮತ್ತು ವಿಸ್ತೃತ ಚರ್ಚೆ ನಂತರ ಈ ಸಮವಸ್ತ್ರವನ್ನು ಅಂತಿಮಗೊಳಿಸಲಾಗಿದೆ.

ಸೇನಾ ಸಿಬ್ಬಂದಿ ಬಿಸಿಲು, ಚಳಿ, ಮಳೆ-ರಾತ್ರಿ, ಹಗಲೆನ್ನದೇ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಹವಾಮಾನ ಏರಿಳಿತವನ್ನು ಎದುರಿಸಲು ಪೂರಕವಾದ ಸಮವಸ್ತ್ರ ಇದಾಗಿದೆ. ಸಿಬ್ಬಂದಿ ಕಾರ್ಯಕ್ಷೇತ್ರದ ಭೌಗೋಳಿಕ ಸ್ವರೂಪ ಹಾಗೂ ಹವಾಮಾನ ಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಇದನ್ನು ರೂಪಿಸಲಾಗಿದೆ.

ಹೊಸ ಸಮವಸ್ತ್ರವು ಮಣ್ಣು ಮತ್ತು ಹಸಿರು ಬಣ್ಣದ ಮಿಶ್ರಣದಿಂದ ಕೂಡಿದೆ. ಹಳೆಯ ಸಮವಸ್ತ್ರಕ್ಕೆ ಹೋಲಿಸಿದರೆ ವಿಭಿನ್ನವಾಗಿದೆ. ಸೇನಾ ಸಿಬ್ಬಂದಿ ಧರಿಸಲು ತುಂಬಾ ಕಂಫರ್ಟ್‌ ಆಗಿರುವಂತೆ ವಿನ್ಯಾಸಗೊಳಿಸಲಾಗಿದೆ.

ನೂತನ ಸಮವಸ್ತ್ರವು ಡಿಜಿಟಲ್‌ ಕಣ್ಗಾವಲಿಗೂ ಸುಲಭವಾಗಿ ನಿಲುಕುವುದಿಲ್ಲ. ಮೇಲ್ನೋಟಕ್ಕೆ ಸಿಬ್ಬಂದಿ ಇರುವಿಕೆಯನ್ನು ಗುರುತಿಸಲಾಗದ ಸಮವಸ್ತ್ರ ಇದಾಗಿದೆ.

ಈ ಸಮವಸ್ತ್ರ ಮುಕ್ತ ಮಾರುಕಟ್ಟೆಯಲ್ಲಿ ಸಾರ್ವಜನಿಕವಾಗಿ ಲಭ್ಯವಿರುವುದಿಲ್ಲ ಎಂಬ ವಿಚಾರವನ್ನು ಮೂಲಗಳು ಸ್ಪಷ್ಟಪಡಿಸಿವೆ.

Copyright © All rights reserved Newsnap | Newsever by AF themes.
error: Content is protected !!