January 8, 2025

Newsnap Kannada

The World at your finger tips!

nandiHills

ಹೊಸ ವರ್ಷಾಚರಣೆಗೆ ಬ್ರೇಕ್ : ನಂದಿಗಿರಿಧಾಮದಲ್ಲಿ ಪ್ರವಾಸಿಗರಿಗೆ 3 ದಿನ ಪ್ರವೇಶ ನಿರ್ಬಂಧ

Spread the love

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿ ಧಾಮದಲ್ಲಿ ಹೊಸ ವರ್ಷಾಚರಣೆಗೆ ಈ ಬಾರಿ ಬ್ರೇಕ್ ಹಾಕಲಾಗಿದೆ.

ರೂಪಾಂತರಗೊಂಡಿರುವ ಕೊರೊನಾ ವೈರಸ್ ಸೋಂಕು ಹೆಚ್ಚಾಗುವ ಆತಂಕದ ಹಿನ್ನೆಲೆ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿ, ಜನವರಿ 2 ರವರೆಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ 30 ರಿಂದ ಜ. 2 ರ ತನಕ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣ ಬಂದ್ ಮಾಡಲಾಗುವುದು.‌

ಡಿಸೆಂಬರ್ 30 ಬೆಳಗ್ಗೆ 6 ಗಂಟೆಯಿಂದ ಜನವರಿ 2 ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ಎಂಟ್ರಿ ಇರುವುದಿಲ್ಲ. ಈ ಮೂಲಕ ನಂದಿಬೆಟ್ಟದಲ್ಲಿ ಹೊಸ ವರ್ಷಾಚರಣೆಯ ಪ್ಲ್ಯಾನ್ ಮಾ ಡಿಕೊಂಡವರಿಗೆ ತೀವ್ರ ನಿರಾಶೆ ಆದಂತಾಗಿದೆ.

Copyright © All rights reserved Newsnap | Newsever by AF themes.
error: Content is protected !!