ನ್ಯೂಜಿಲೆಂಡ್​​ ಸೀರಿಸ್​​ ಗೆ ಟೀಂ ಇಂಡಿಯಾದಲ್ಲಿ ಮೂವರು ಹೊಸ ಆಟಗಾರರಿಗೆ ಅವಕಾಶ

Team Newsnap
1 Min Read

ನ್ಯೂಜಿಲೆಂಡ್ ವಿರುದ್ದದ ಟಿ20 ಸರಣಿಗಾಗಿ ಟೀಮ್ ಇಂಡಿಯಾ ತಂಡ ಪ್ರಕಟ ಮಾಡಲಾಗಿದೆ.

ನಾಯಕನಾಗಿ ರೋಹಿತ್ ಶರ್ಮಾ, ಉಪನಾಯಕನಾಗಿ ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ

16 ಸದಸ್ಯರನ್ನು ಒಳಗೊಂಡಿರುವ ಈ ತಂಡದಲ್ಲಿ ಕೆಲ ಆಟಗಾರರು ಕಂಬ್ಯಾಕ್ ಮಾಡಿದರೆ, ಇನ್ನು ಕೆಲ ಆಟಗಾರರು ಚೊಚ್ಚಲ ಅವಕಾಶ ಪಡೆದಿದ್ದಾರೆ.

ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಮೂವರು ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮೊದಲ ಬಾರಿಗೆ ವೆಂಕಟೇಶ್ ಅಯ್ಯರ್, ಹರ್ಷಲ್ ಪಟೇಲ್ ಹಾಗೂ ಅವೇಶ್ ಖಾನ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

ಐಪಿಎಲ್​ನ ಭರ್ಜರಿ ಪ್ರದರ್ಶನದ ಕಾರಣದಿಂದ ವೆಂಕಟೇಶ್​ ಅಯ್ಯರ್​ಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಕ್ಕಿದೆ.

ಇನ್ನು ಆರ್​ಸಿಬಿ ಪರ ಅತ್ಯುತ್ತಮವಾಗಿ ಬೌಲಿಂಗ್ ಮಾಡಿ 32 ವಿಕೆಟ್ ಉರುಳಿಸಿದ್ದ ಹರ್ಷಲ್ ಪಟೇಲ್, 24 ವಿಕೆಟ್ ಪಡೆದು 2ನೇ ಯಶಸ್ವಿ ಬೌಲರ್ ಎನಿಸಿಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅವೇಶ್ ಖಾನ್​ ಕೂಡ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

Share This Article
Leave a comment