February 21, 2026

Newsnap Kannada

The World at your finger tips!

vishnu1

ವಿಷ್ಣು ಸ್ಮಾರಕ ಸ್ಥಳ ಪರಿಶೀಲಿಸಿದ ವಾರ್ತಾ ಆಯುಕ್ತ ಡಾ.ಪಿ.ಎಸ್.ಹರ್ಷ

Spread the love

ಮೈಸೂರು ತಾಲ್ಲೂಕಿನ ಹಾಲಾಳು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಖ್ಯಾತ ನಟ ವಿಷ್ಣುವರ್ಧನ್ ಸ್ಮಾರಕ ಸ್ಥಳಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ಭೇಟಿ ನೀಡಿ ಪರಿಶೀಲನೆ ನಡೆಸಿದರು.

vishnu s

ಚಿತ್ರ ಗ್ಯಾಲರಿ ಮತ್ತು ಸಭಾಂಗಣದ ಕಾಮಗಾರಿ ಆರಂಭಗೊಂಡಿದ್ದು, ವಿಶ್ವ ದರ್ಜೆಯ ಸ್ಮಾರಕ ಸ್ಥಳ ಇದಾಗಬೇಕೆಂಬ ಆಶಯ ತಮ್ಮದಾಗಿದೆ ಎಂದ ಅವರು, ರಾಜ್ಯ ಸರ್ಕಾರವೂ ಸಹ ಈ ನಿಟ್ಟಿನಲ್ಲಿ ಅತೀವ ಆಸಕ್ತಿ ವಹಿಸುತ್ತಿದೆ ಎಂದು ತಿಳಿಸಿದರು.

ಸುಮಾರು 11 ಕೋಟಿ ರೂ. ಯೋಜನೆ ಇದಾಗಿದ್ದು , ಐದು ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಷ್ಣು ಸ್ಮಾರಕವನ್ನು ಅತ್ಯಂತ ಕ್ಷಿಪ್ರವಾಗಿ ಹಾಗೂ ಉತ್ಕೃಷ್ಟವಾಗಿ ನಾಡಿಗೆ ನೀಡುವ ಸಂಕಲ್ಪಕ್ಕೆ ವಾರ್ತಾ ಇಲಾಖೆ ಕಟಿಬದ್ಧವಾಗಿದೆ ಎಂದರು.

error: Content is protected !!