ಹುಬ್ಬಳ್ಳಿ ಗೆ ಭೇಟಿ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಿಂದ ಹೊರಬರುತ್ತಿದ್ದಂತೆ ಮುಂದಿನ ಸಿಎಂ ಸಿದ್ದರಾಮಯ್ಯ ಘೋಷಣೆಗಳು ಮೊಳಗಿದವು.
ಸಿದ್ದರಾಮಯ್ಯ ಅಭಿಮಾನಿ ಸಂಘದ ಗಿರೀಶ್ ಗದಿಗೆಪ್ಪಗೌಡ `ಮುಂದಿನ ಸಿಎಂ ಸಿದ್ದರಾಮಯ್ಯ, ಹೌದೋ ಹುಲಿಯಾ.. ಮುಂದಿನ ಸಿಎಂ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ಗದರಿಸಿ ಸುಮ್ಮನಿರುವಂತೆ ಸೂಚಿಸಿದರು. ಮುರುಘಾ ಸ್ವಾಮೀಜಿಯದ್ದು ಅಕ್ಷಮ್ಯ ಅಪರಾಧ: ಶಿಕ್ಷೆಯಾಗಬೇಕು; B S ಯಡಿಯೂರಪ್ಪ
ಸಿದ್ದರಾಮಯ್ಯ ಅಭಿಮಾನಿ ಸಂಘದ ಗಿರೀಶ್ ಗದಿಗೆಪ್ಪಗೌಡ `ಮುಂದಿನ ಸಿಎಂ ಸಿದ್ದರಾಮಯ್ಯ, ಹೌದೋ ಹುಲಿಯಾ.. ಮುಂದಿನ ಸಿಎಂ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಗದರಿಸಿ ಸುಮ್ಮನಿರುವಂತೆ ಸೂಚಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದು , ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದೆ. ಜನರು ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್‌ಗೆ ಅಧಿಕಾರ ಕೊಡಲು ಸಂಕಲ್ಪ ಮಾಡಿದ್ದಾರೆ. ಅದಕ್ಕಾಗಿ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಜನ ಸೇರುತ್ತಿಲ್ಲ. ಆದರೆ ಜನರನ್ನು ಹಿಡಿದಿಡಲು ಕಾರ್ಯಕ್ರಮದ ಮುಂಭಾಗದ ಗೇಟ್ ಗಳನ್ನಿಟ್ಟು ಬೀಗ ಹಾಕಿ ಕಟ್ಟಿಹಾಕುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಮೀಸಲಾತಿ ಕುರಿತಂತೆ ಮಾತನಾಡಿದ ಸಿದ್ದು, ನನಗೆ ಗೊತ್ತಿರುವಂತೆ ಸಂವಿಧಾನದ ವಿದಿ 15 ಮತ್ತು 16ರ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಅವಕಾಶವಿಲ್ಲ. ಸಾಮಾಜಿಕವಾಗಿ ಹಿಂದುಳಿದ ಮತ್ತು ಅಸ್ಪೃಶ್ಯತೆ ಹಾಗೂ ಅಸಮಾನತೆ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸಮೂದಾಯಗಳಿಗೆ ಮಾತ್ರ ಮೀಸಲು ನೀಡಬಹುದು ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು