ಮತ್ತೆ ಮುಂದಿನ ಸಿಎಂ ಸಿದ್ದರಾಮಯ್ಯ: ಹುಬ್ಬಳ್ಳಿಯಲ್ಲಿ ಮೊಳಗಿದ ಘೋಷಣೆ

Team Newsnap
1 Min Read

ಹುಬ್ಬಳ್ಳಿ ಗೆ ಭೇಟಿ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಿಂದ ಹೊರಬರುತ್ತಿದ್ದಂತೆ ಮುಂದಿನ ಸಿಎಂ ಸಿದ್ದರಾಮಯ್ಯ ಘೋಷಣೆಗಳು ಮೊಳಗಿದವು.


ಸಿದ್ದರಾಮಯ್ಯ ಅಭಿಮಾನಿ ಸಂಘದ ಗಿರೀಶ್ ಗದಿಗೆಪ್ಪಗೌಡ `ಮುಂದಿನ ಸಿಎಂ ಸಿದ್ದರಾಮಯ್ಯ, ಹೌದೋ ಹುಲಿಯಾ.. ಮುಂದಿನ ಸಿಎಂ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ಗದರಿಸಿ ಸುಮ್ಮನಿರುವಂತೆ ಸೂಚಿಸಿದರು. ಮುರುಘಾ ಸ್ವಾಮೀಜಿಯದ್ದು ಅಕ್ಷಮ್ಯ ಅಪರಾಧ: ಶಿಕ್ಷೆಯಾಗಬೇಕು; B S ಯಡಿಯೂರಪ್ಪ

ಸಿದ್ದರಾಮಯ್ಯ ಅಭಿಮಾನಿ ಸಂಘದ ಗಿರೀಶ್ ಗದಿಗೆಪ್ಪಗೌಡ `ಮುಂದಿನ ಸಿಎಂ ಸಿದ್ದರಾಮಯ್ಯ, ಹೌದೋ ಹುಲಿಯಾ.. ಮುಂದಿನ ಸಿಎಂ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಗದರಿಸಿ ಸುಮ್ಮನಿರುವಂತೆ ಸೂಚಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದು , ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದೆ. ಜನರು ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್‌ಗೆ ಅಧಿಕಾರ ಕೊಡಲು ಸಂಕಲ್ಪ ಮಾಡಿದ್ದಾರೆ. ಅದಕ್ಕಾಗಿ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಜನ ಸೇರುತ್ತಿಲ್ಲ. ಆದರೆ ಜನರನ್ನು ಹಿಡಿದಿಡಲು ಕಾರ್ಯಕ್ರಮದ ಮುಂಭಾಗದ ಗೇಟ್ ಗಳನ್ನಿಟ್ಟು ಬೀಗ ಹಾಕಿ ಕಟ್ಟಿಹಾಕುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಮೀಸಲಾತಿ ಕುರಿತಂತೆ ಮಾತನಾಡಿದ ಸಿದ್ದು, ನನಗೆ ಗೊತ್ತಿರುವಂತೆ ಸಂವಿಧಾನದ ವಿದಿ 15 ಮತ್ತು 16ರ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಅವಕಾಶವಿಲ್ಲ. ಸಾಮಾಜಿಕವಾಗಿ ಹಿಂದುಳಿದ ಮತ್ತು ಅಸ್ಪೃಶ್ಯತೆ ಹಾಗೂ ಅಸಮಾನತೆ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸಮೂದಾಯಗಳಿಗೆ ಮಾತ್ರ ಮೀಸಲು ನೀಡಬಹುದು ಎಂದು ತಿಳಿಸಿದರು.

Share This Article
Leave a comment