January 14, 2026

Newsnap Kannada

The World at your finger tips!

yadi bomm

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ – ಬಿ ಎಸ್ ಯಡಿಯೂರಪ್ಪ ಪ್ರಕಟ

Spread the love

ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ. ಮುಖ್ಯಮಂತ್ರಿ ಬೊಮ್ಮಾಯಿ
ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಯಲ್ಲಾಪುರದಲ್ಲಿ ಗುರುವಾರ ಮಾತನಾಡಿದ ಅವರು, ನಾನು ಈಗ ಯಾವುದೇ ಸ್ಥಾನಮಾನದಲ್ಲಿ ಇಲ್ಲ. ಅಧಿಕಾರ ಇಲ್ಲದೇನೇ ರಾಜ್ಯದುದ್ದಕ್ಕೂ ಪ್ರವಾಸ ಮಾಡಿ ಪಕ್ಷದ ಬಲವರ್ಧನೆಗೆ ಪ್ರಯತ್ನಿಸುತ್ತಿದ್ದೇನೆ ಎಂದರು

ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಏನು ಕೆಲಸ ಮಾಡಬೇಕು, ಅದನ್ನು ನಿರಂತರವಾಗಿ ಮಾಡುತ್ತೇನೆ. ಈಗಿನ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯುತ್ತದೆ. ಇದರಲ್ಲಿ ಯಾವುದೇ ತಪ್ಪಿಲ್ಲ. ನಾನೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದೂ ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ತಿಳಿಸಿದ್ದಾರೆ.

ಬಿಟ್ ಕಾಯಿನ್ ವಿಚಾರ ನಿಮಗೆಲ್ಲಾ ಗೊತ್ತಿದೆ. ಈ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಬಿಟ್ ಕಾಯಿನ್‌ನಲ್ಲಿ ಪಾಲ್ಗೊಂಡಿದ್ದರೆ ಅದು ಅಕ್ಷಮ್ಯ ಅಪರಾಧ. ಬಿಟ್ ಕಾಯಿನ್ ಬಗ್ಗೆ ಯಾರಿಗಾದರೂ ಮಾಹಿತಿಯಿದ್ದರೆ ಮಾಹಿತಿ ಒದಗಿಸಿ. ಅದ್ಯಾವುದೇ ಪಕ್ಷದವರಾಗಿರಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.

error: Content is protected !!