ಶಿವಮೊಗ್ಗದ ಸಕ್ಕರೆಬೈಲು ಆನೆ ಬಿಡಾರದ ಮರಿಯಾನೆಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹೆಸರು ನಾಮಕರಣ ಮಾಡಲಾಗಿದೆ.
ಕಳೆದ ಎರಡು ತಿಂಗಳ ಹಿಂದೆಯಷ್ಟೇ, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಶಿವಮೊಗ್ಗದ ಸಕ್ಕರೆಬೈಲು ಆನೆ ಬಿಡಾರಕ್ಕೆ ಭೇಟಿ ನೀಡಿದ್ದರು.
ವನ್ಯಜೀವಿ ರಕ್ಷಣೆಗೋಸ್ಕರ ಮತ್ತು ಅರಣ್ಯ ಸಂರಕ್ಷಣೆ ಕುರಿತ ಸಾಕ್ಷ್ಯ ಚಿತ್ರ ಚಿತ್ರೀಕರಣಕ್ಕಾಗಿ ಆಗಮಿಸಿದ್ದರು.
ಈ ವೇಳೆ ಬಿಡಾರದಲ್ಲಿದ್ದ ಮರಿಯಾನೆಗೆ ಅಪ್ಪಿ ಮುದ್ದಾಡಿದ್ದರು. ಹೀಗಾಗಿ ಈ ಮರಿ ಗಜಕ್ಕೆ ಪವರ್ ಸ್ಟಾರ್ ಹೆಸರು ಇಡಬೇಕು ಎಂಬುದು ಮಾವುತರು, ಕಾವಾಡಿಗಳು, ಪ್ರವಾಸಿಗರ ಆಸೆಯಾಗಿದೆ.
ಅರಣ್ಯಾಧಿಕಾರಿಗಳು ಸಕ್ಕರೆಬೈಲು ಆನೆ ಬಿಡಾರದ ಮರಿಯಾನೆಗೆ ಪುನೀತ್ ರಾಜ್‍ಕುಮಾರ್ ಹೆಸರು ನಾಮಕರಣ ಮಾಡಿದ್ದಾರೆ.
ಮರಿಯಾನೆಗಳಿಗೆ ಹುಟ್ಟಿದ ಕೂಡಲೇ ನಾಮಕರಣ ಮಾಡುವುದಿಲ್ಲ. ಬದಲಾಗಿ ಮರಿಯಾನೆಯನ್ನು ಅದರ ತಾಯಿಯಾನೆಯಿಂದ ಬೇರ್ಪಡಿಸುವ ಪ್ರಕ್ರಿಯೆ ನಡೆಸಿ, ಅದನ್ನು ಪ್ರತ್ಯೇಕವಾಗಿ ಇರಿಸಿದ ಬಳಿಕ ಮರಿಯಾನೆಗೆ ನಾಮಕರಣ ಮಾಡಲಾಗುತ್ತದೆ. ಈ ಪ್ರಕ್ರಿಯೆಯನ್ನು ವೀನಿಂಗ್ ಎಂದು ಕರೆಯುತ್ತಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )