ಜೆಡಿಎಸ್ ಯುವ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ

Team Newsnap
1 Min Read
Nikhil resigns as JDS youth president ಜೆಡಿಎಸ್ ಯುವ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ರಾಜೀನಾಮೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ ನಿಖಿಲ್ ಕುಮಾರಸ್ವಾಮಿ ಪಕ್ಷದ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕು. ಪಕ್ಷವನ್ನು ಕಟ್ಟುವ ಕಾರ್ಯ ಆಗಬೇಕು. ಸೋಲಿನಿಂದ ನಾನು ಕಂಗೆಟ್ಟಿಲ್ಲ.

ಇನ್ನೂ ಮುಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೆಳೆಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.ಗೋ ನಿಷೇಧ – ಮತಾಂತರ ಸೇರಿದಂತೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆ ವಾಪಸ್ಸು : ಸಚಿವ ಪ್ರಿಯಾಂಕ್‌ ಖರ್ಗೆ

ಚುನಾವಣೆಯಲ್ಲಿ ಸೋಲೇ ಅಂತಿಮವಲ್ಲ. ಸೋತಿದ್ದರೂ ಸಹ ಪಕ್ಷದಿಂದ ದೂರ ಉಳಿಯದೇ ಪಕ್ಷವನ್ನು ಬೆಳೆಸಲು ದುಡಿಯುತ್ತೇನೆ. ಪಕ್ಷ ಮರು ನಿರ್ಮಾಣ ಆಗಬೇಕು. ಅದಕ್ಕಾಗಿಯೇ ನಾನು ರಾಜಿನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

Share This Article
Leave a comment