ನಿತೀಶ್ ಕುಮಾರ್ ರ ಜೆಡಿಯು ಪಕ್ಷ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರೂ, ನಿತೀಶ್ ಕುಮಾರ್ ನಿರಂತರವಾಗಿ ನಾಲ್ಕನೇ ಬಾರಿಗೆ ಹಾಗೂ ಒಟ್ಟು ಏಳನೇ ಬಾರಿಗೆ ಬಿಹಾರ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುವುದನ್ನು ತಪ್ಪಿಸಲು ಸಾಧ್ಯವಾಗಿಲ್ಲ.
ನಿತೀಶ್ ಕುಮಾರ್ 7ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಆಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.
ಪಾಟ್ನಾದ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಹಾರ ರಾಜ್ಯಪಾಲ ಚವಾಣ್, ನಿತೀಶ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯುಗೆ ಕಡಿಮೆ ಸ್ಥಾನಗಳು ಬಂದ ಹಿನ್ನೆಲೆ ನಿತೀಶ್ ಕುಮಾರ್ ಅವರಿಗೆ ಸಿಎಂ ಪಟ್ಟ ಕೈತಪ್ಪಬಹುದು ಎಂದು ಹೇಳಲಾಗಿತ್ತು. ಆದರೆ, ಪಾಟ್ನಾದಲ್ಲಿ ನಡೆದ ಎನ್ಡಿಎ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನೇ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕರು ಅಧಿಕೃತವಾಗಿ ಆಯ್ಕೆ ಮಾಡಿದ್ದರು. ಈ ಹಿನ್ನೆಲೆ ನಿತೀಶ್ ಕುಮಾರ್ ಅವರು ದಾಖಲೆಯ 4ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
243 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಒಟ್ಟು 125 ಸ್ಥಾನಗಳನ್ನು ಗೆದ್ದು ಸ್ಪಟ್ಟ ಬಹುಮತ ಪಡೆದಿತ್ತು. ಆರ್ಜೆಡಿ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟ 110 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಎನ್ಡಿಎ ಮೈತ್ರಿಕೂಟದ 125 ಸ್ಥಾನಗಳಲ್ಲಿ ಜೆಡಿಯು ಕೇವಲ 43 ಸ್ಥಾನ ಪಡೆದರೆ, ಬಿಜೆಪಿ 74 ಸ್ಥಾನಗಳನ್ನು ಜಯಿಸಿತ್ತು.
ಇಬ್ಬರು ಡಿಸಿಎಂ ಪದಗ್ರಹಣ
ನಿತೀಶ್ ಕುಮಾರ ಅವರೊಂದಿಗೆ ಬಿಜೆಪಿಯ ಶಾಸಕರಾದ ತಾರ್ ಕಿಶೋರ್ ಪ್ರಸಾದ್ ಹಾಗೂ ರೇಣುದೇವಿ ಅವರು ಉಪ ಮುಖ್ಯ ಮಂತ್ರಿ ಗಳಾಗಿ ಪ್ರಮಾಣ ಸ್ವೀಕರಿಸಿದರು.
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ