Main News

7 ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಪದಗ್ರಹಣ

ನಿತೀಶ್ ಕುಮಾರ್ ರ ಜೆಡಿಯು  ಪಕ್ಷ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರೂ, ನಿತೀಶ್ ಕುಮಾರ್ ನಿರಂತರವಾಗಿ ನಾಲ್ಕನೇ ಬಾರಿಗೆ ಹಾಗೂ ಒಟ್ಟು ಏಳನೇ ಬಾರಿಗೆ ಬಿಹಾರ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುವುದನ್ನು ತಪ್ಪಿಸಲು ಸಾಧ್ಯವಾಗಿಲ್ಲ. 

ನಿತೀಶ್ ಕುಮಾರ್ 7ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಆಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.

ಪಾಟ್ನಾದ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಹಾರ ರಾಜ್ಯಪಾಲ ಚವಾಣ್, ನಿತೀಶ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯುಗೆ ಕಡಿಮೆ ಸ್ಥಾನಗಳು ಬಂದ ಹಿನ್ನೆಲೆ ನಿತೀಶ್ ಕುಮಾರ್ ಅವರಿಗೆ ಸಿಎಂ ಪಟ್ಟ ಕೈತಪ್ಪಬಹುದು ಎಂದು ಹೇಳಲಾಗಿತ್ತು. ಆದರೆ, ಪಾಟ್ನಾದಲ್ಲಿ ನಡೆದ ಎನ್​ಡಿಎ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನೇ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕರು ಅಧಿಕೃತವಾಗಿ ಆಯ್ಕೆ ಮಾಡಿದ್ದರು. ಈ ಹಿನ್ನೆಲೆ ನಿತೀಶ್ ಕುಮಾರ್ ಅವರು ದಾಖಲೆಯ 4ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

243 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟ ಒಟ್ಟು 125 ಸ್ಥಾನಗಳನ್ನು ಗೆದ್ದು ಸ್ಪಟ್ಟ ಬಹುಮತ ಪಡೆದಿತ್ತು. ಆರ್​ಜೆಡಿ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟ 110 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.  ಎನ್​ಡಿಎ ಮೈತ್ರಿಕೂಟದ 125 ಸ್ಥಾನಗಳಲ್ಲಿ ಜೆಡಿಯು ಕೇವಲ 43 ಸ್ಥಾನ ಪಡೆದರೆ, ಬಿಜೆಪಿ 74 ಸ್ಥಾನಗಳನ್ನು ಜಯಿಸಿತ್ತು.

ಇಬ್ಬರು ಡಿಸಿಎಂ ಪದಗ್ರಹಣ

ನಿತೀಶ್ ಕುಮಾರ ಅವರೊಂದಿಗೆ ಬಿಜೆಪಿಯ ಶಾಸಕರಾದ ತಾರ್ ಕಿಶೋರ್ ಪ್ರಸಾದ್ ಹಾಗೂ ರೇಣುದೇವಿ ಅವರು ಉಪ ಮುಖ್ಯ ಮಂತ್ರಿ ಗಳಾಗಿ ಪ್ರಮಾಣ ಸ್ವೀಕರಿಸಿದರು.

Team Newsnap
Leave a Comment
Share
Published by
Team Newsnap

Recent Posts

ಅಕ್ಷಯ ತೃತೀಯ ಬಂತು ಮತ್ತೇ ಖುಷಿಯ ತಂತು

ಅಕ್ಷಯ ತೃತೀಯ ಹಿಂದುಗಳಿಗೆ ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ, ಅಕ್ಷಯ ಎಂದರೆ ಶಾಶ್ವತ ಎಂದರ್ಥ! ಸ್ನೇಹಾ ಆನಂದ್ 🌻 ಈ… Read More

May 10, 2024

SSLC ವಿದ್ಯಾರ್ಥಿನಿಯ ಬರ್ಬರ ಹತ್ಯೆ

ಮಡಿಕೇರಿ :ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಅಮಾನುಷ ಕೃತ್ಯ ನಡೆದಿದ್ದು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಭೀಕರ ಹತ್ಯೆ ನಡೆದಿದೆ. ಮೀನಾ… Read More

May 10, 2024

ಎಸ್ ಎಸ್ ಎಲ್ ಸಿ ಕಡಮೆ ಅಂಕ : ಮದ್ದೂರಿನಲ್ಲಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ

ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More

May 9, 2024

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024