ಬೆಲ್ಲದ ಮೇಲೆ ಶೇ.5 ಜಿಎಸ್‌ಟಿ ವಿಧಿಸಿರುವುದನ್ನು ವಾಪಸ್ ಪಡೆಯಬೇಕೆಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಕೇಂದ್ರದ ವಿತ್ತ ಸಚಿವರಿಗೆ ಮನವಿ ಮಾಡಿದ್ದಾರೆ.
ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿ ಇತರ ರಾಜ್ಯಗಳಲ್ಲಿನ ಕಬ್ಬು ಬೆಳೆಗಾರರಿಗೆ ಹೋಲಿಕೆ ಮಾಡಿದರೆ ಕರ್ನಾಟಕ ರಾಜ್ಯದಲ್ಲಿನ ಬೆಳೆಗಾರರಿಗೆ ಮುಕ್ತ ಹಾಗೂ ನ್ಯಾಯ ಸಮ್ಮತ ದರ (ಎಫ್‌ಆರ್‌ಪಿ) ಕಡಿಮೆಯೇ ಇದೆ ಎಂದಿದ್ದಾರೆ.ಇದನ್ನು ಓದಿ –ತೈವಾನ್ ನಂತರ ಜಪಾನಿನ ಮೇಲೂ ಚೀನಾ ಕ್ಷಿಪಣಿ ದಾಳಿ
ನವದೆಹಲಿಯಲ್ಲಿ ಗುರುವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಈ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಮನವಿ ಸಲ್ಲಿಸಿದರು.
ಉತ್ತರದ ರಾಜ್ಯಗಳನ್ನು ಹೋಲಿಕೆ ಮಾಡಿದಾಗ ಕರ್ನಾಟಕದಲ್ಲಿ ಇರುವ ಬೆಲ್ಲ ತಯಾರಿಕಾ ಘಟಕಗಳ ಪರಿಸ್ಥಿತಿ ಚೆನ್ನಾಗಿಲ್ಲ ಎಂದು ವಿವರಿಸಿದರು. ಮಂಡ್ಯ ಜಿಲ್ಲೆ ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಕೂಡ ಕಬ್ಬು ಬೆಳೆಗಾರರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದು ವಿತ್ತ ಸಚಿವರಿಗೆ ವಿವರಿಸಿದರು.
ಮನವಿಯನ್ನು ಪರಿಶೀಲಿಸಿದ ನಿರ್ಮಲಾ ಸೀತಾರಾಮನ್ ಅವರು, ಬೆಲ್ಲಕ್ಕೆ ಶೇ.5 ಜಿಎಸ್‌ಟಿ ವಿಧಿಸಿದ ಬಗ್ಗೆ ಮಂಡಳಿಯ ಗಮನಕ್ಕೆ ತಂದು ಪರಿಶೀಲಿಸಲಾಗುತ್ತದೆ. ಜತೆಗೆ ಇತರ ಕೋರಿಕೆಗಳಿಗೆ ಸ್ಪಂದಿಸಿ ಪರಿಹಾರ ಸೂತ್ರ ಪ್ರಕಟಿಸುವುದಾಗಿ ಹೇಳಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ