ರಾಜ್ಯದ ಬಿಜೆಪಿ ನೇತೃತ್ವದ
ಸರ್ಕಾರಕ್ಕೆ ಜಾರಕಿಗೊಳಿ ಸಹೋದರರಿಂದ ಬೆದರಿಕೆ ಇದೆ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹೇಳಿದರು.
ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಿವರಾಮೇಗೌಡರು
ಎಸ್‌ಐಟಿ ತನಿಖೆಯಿಂದ ಜಾರಕಿಹೊಳಿಗೆ ಕ್ಲೀನ್‌ಚಿಟ್ ಸಿಗುವುದರಲ್ಲಿ ಅನುಮಾನವಿಲ್ಲ ಎಂದರು.
ಒಬ್ಬ ಅತ್ಯಾಚಾರಿ ಆರೋಪಿ ಸ್ಥಾನದಲ್ಲಿರುವ ವ್ಯಕ್ತಿ ಯನ್ನು ಖುದ್ದು ಮುಖ್ಯಮಂತ್ರಿಗಳೆ ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದಾರೆ.
ಹೀಗಿರುವಾಗ ಎಸ್ ಐಟಿ ತನಿಖೆ ಹಳ್ಳ ಹಿಡಿಯುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು.
ಆರೋಪಿಯನ್ನು ಬಂಧಿಸದಿದ್ರೆ ಸಿಬಿಐ ತನಿಖೆಗೆ ಒತ್ತಾಯಿಸಿ ನಾವೇ ಖಾಸಗಿ ಪಿಐಎಲ್ ಹಾಕ್ತಿವಿ. ಮುಂದೆ ನಮ್ಮ ಸರ್ಕಾರ ಬಂದ್ರೆ ಸಿಬಿಐ ತನಿಖೆಗೆ ಪ್ರಕರಣವನ್ನ ವಹಿಸುತ್ತೇವೆ. ಎಂದು ತಿಳಿಸಿದರು.
ಡ್ರಗ್ ಕೇಸ್ ರೀತಿ ಸಿಡಿ ಕೇಸ್ ಕೂಡ ಹಳ್ಳ ಹಿಡಿಯುತ್ತದೆ. ಡ್ರಗ್ ಕೇಸ್‌ನಲ್ಲಿ ಬಿಲ ಅಗೆದು ಇಲಿ ಹಿಡಿಯುವ ಹಾಗೆ
ಬೇಕಾದವರನ್ನು ಬಿಟ್ಟು, ಬೇಡದವರನ್ನು ಹಿಡಿದರು. ಅದೇ ರೀತಿ ಈ ಕೇಸ್ ಸಹ ಹಳ್ಳ ಹಿಡಿಯುತ್ತದೆ. ಪೊಲೀಸರು ಸರ್ಕಾರ ಅನ್ನ ತಿನ್ನುತ್ತಿದ್ದೇವೆ ಎಂದರೆ ಜಾರಕಿಹೊಳಿಯನ್ನು ಬಂಧಿಸಬೇಕಿತ್ತು.
ಆದ್ರೆ ಇಲ್ಲಿವರೆಗೆ ಬಂಧಿಸುವ ಕೆಲಸ ಆಗಿಲ್ಲ ಎಂದರು.
ಈ ನಾವು ಕೋರ್ಟ್‌ನಲ್ಲಿ ಈ ಬಗ್ಗೆ ಖಾಸಗಿ ಕೇಸ್ ಹಾಕಿ, ಸಿಬಿಐಗೆ ವಹಿಸಲು ಹೋರಾಟ ಮಾಡುತ್ತೇವೆ. ಕುಮಾರಸ್ವಾಮಿ ಸರ್ಕಾರ ಬಂದಾಗ ಈ ಕೇಸ್ ಬಗ್ಗೆ ಸಿಬಿಐ ತನಿಖೆ ಮಾಡಿಸುತ್ತೇವೆ. ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ.
ಎಸ್‌ಐಟಿ ಅವರು ಸರಿಯಾಗಿ ಕೆಲಸ ಮಾಡುತ್ತಾರೆ ಎಂದು ಗ್ಯಾರಂಟಿ ಇಲ್ಲ ಎಂದರು.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ