ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕಾಗಿ ಸೋನಾಕ್ಷಿಯನ್ನು ಮೊರಾದಾಬಾದ್‍ಗೆ ಬರುವಂತೆ ಕೇಳಲಾಗಿತ್ತು. ಅದಕ್ಕಾಗಿ 37 ಲಕ್ಷ ರೂ. ಹಣವನ್ನು ನೀಡಲಾಗಿತ್ತು. ಆದರೆ ಸೋನಾಕ್ಷಿ ಗೈರಾಗಿದ್ದರು ಇದೀಗ ನ್ಯಾಯಾಲಯ ಅವರ ವಿರುದ್ಧ ವಾರೆಂಟ್ ಜಾರಿ ಮಾಡಿದೆ.
ಕಾರ್ಯಕ್ರಮ ಆಯೋಜಕ ಪ್ರಮೋದ್ ಶರ್ಮಾ, ಮೊರಾದಾಬಾದ್‍ನ ಕಟ್ಘರ್ ಪೋಲಿಸ್ ಠಾಣೆ ಪ್ರದೇಶದ ನಿವಾಸಿಯಾಗಿದ್ದಾರೆ.
ಕಾರ್ಯಕ್ರಮವೊಂದಕ್ಕೆ ಸೋನಾಕ್ಷಿಯನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದರು. ಈವೆಂಟ್‍ನಲ್ಲಿ ಸೋನಾಕ್ಷಿ ಭಾಗವಹಿಸಲಿಲ್ಲ.
ಆಗ ಈವೆಂಟ್ ಆಯೋಜಕರು ಹಣವನ್ನು ಮರುಪಾವತಿ ಮಾಡುವಂತೆ ಹೇಳಿದ್ದಾರೆ. ಈವೆಂಟ್ ಆಯೋಜಕರಿಗೆ ಹಣ ನೀಡಲು ಸೋನಾಕ್ಷಿ ಮ್ಯಾನೇಜರ್ ನಿರಾಕರಿಸಿದ್ದರು ಎನ್ನಲಾಗಿದೆ.
ಸೋನಾಕ್ಷಿ ಸಿನ್ಹಾ ಅವರಿಗೆ ಹಲವು ಬಾರಿ ಕರೆ ಮಾಡಿದರೂ ಹಣ ಸಿಗದಿದ್ದಾಗ ವಂಚನೆ ಪ್ರಕರಣ ದಾಖಲಾಗಿತ್ತು.
ಗೈರು ಹಾಜರಾಗಿದ್ದರಿಂದ ವಂಚನೆ ಪ್ರಕರಣದಲ್ಲಿ ನ್ಯಾಯಾಲಯ ಇದೀಗ ಅವರ ವಿರುದ್ಧ ವಾರೆಂಟ್ ಜಾರಿ ಮಾಡಿದೆ.
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
More Stories
ಬಿಗ್ ಬಾಸ್ ತೆಲುಗು ಗೆದ್ದ ಮೈಸೂರಿನ ನಿಖಿಲ್ ಮಳಿಯಕ್ಕಲ್
ವಿಶ್ವದಾಖಲೆ ತಬಲಾ ವಾದಕ ಉಸ್ತಾದ್ ಜಾಕಿರ್ ಹುಸೇನ್ ವಿಧಿವಶ
ಕಾಲ್ತುಳಿತದಲ್ಲಿ ಮಹಿಳೆ ಸಾವು: ನಟ ಅಲ್ಲು ಅರ್ಜುನ್ ಬಂಧನ