ನೋ ಬಂದ್ – ಓನ್ಲಿ ಪ್ರೊಟೆಸ್ಟ್ : ಡಿಕೆಶಿ ಉವಾಚ

Team Newsnap
1 Min Read

ಬೆಂಗಳೂರು : ನಾಳೆ ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ. ಆದರೆ ಬಂದ್ ಮಾಡಲು ಅವಕಾಶವಿಲ್ಲ. ಉಪ ಮುಖ್ಯಮಂತ್ರಿ ಡಿ ಕೆ ಶಿವ ಕುಮಾರ್ ಗುರುವಾರ ಘೋಷಣೆ ಮಾಡಿದರು.

ತಮಿಳುನಾಡಿಗೆ ಕಾವೇರಿ ನೀರು ಬಿಡುವ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆಶಿ ಅವರು ಈ ನಿಲುವನ್ನು ಪ್ರಕಟಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿ , ನಾಳೆ ಸಾವರ್ಜನಿಕರಿಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ. ಸುಪ್ರೀಂ ಕೋರ್ಟ್,‌ ಹೈಕೋರ್ಟ್ ಬಂದ್ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ನೀಡಿವೆ,‌ ಅವನ್ನು ಪಾಲಿಸಬೇಕು. ಕಾವೇರಿ ನದಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಶೇ 35 ರಷ್ಟು ಮಳೆ ಕೊರತೆ : ಕಾದಿವೆ ಆಘಾತಕಾರಿ ದಿನಗಳು

ದಯವಿಟ್ಟು ಕಾನೂನು ಪಾಲಿಸಿ, ಬಂದ್ ಮಾಡದೆ ಪ್ರತಿಭಟನೆ ಮಾಡಿ ಎಂದು ಜನರಲ್ಲಿ ಮನವಿ ಮಾಡಿದರು.

Share This Article
Leave a comment