ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅವಕಾಶವೇ ಇಲ್ಲ: ಜಮೀರ್ ಅಹ್ಮದ್ ಖಾನ್

Team Newsnap
1 Min Read
pic credits : deccanherald.com

ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ ಇರುವ ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶವೇ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು

ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್ ಅವರು, ಈದ್ಗಾ ಮೈದಾನದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವದ ತ್ರಿವರ್ಣ ಧ್ವಜಾರೋಹಣ, ಜನವರಿ 26ರಂದು ಗಣರಾಜ್ಯೋತ್ಸವ ವೇಳೆ ತ್ರಿವರ್ಣ ಧ್ವಜಾರೋಹಣ ಹಾಗೂ ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡ ಧ್ವಜಾರೋಹಣಕ್ಕೆ ಮಾತ್ರ ಅವಕಾಶ ಇದೆ ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಈದ್ಗಾ ಮೈದಾನ ಕಂದಾಯ ಇಲಾಖೆ ಸ್ವತ್ತು ಎಂದು ಈಗಾಗಲೇ ಬಿಬಿಎಂಪಿ ಹೇಳಿದೆ. ಆದರೆ ಇದು ನಮ್ಮ ಸ್ವತ್ತು ಎಂದು ರಾಜ್ಯ ವಕ್ಫ್‌ ಬೋರ್ಡ್‌ ವಾದಿಸುತ್ತಿದೆ. ಇಷ್ಟಾದ್ರೂ ಇದು ಕಾನೂನು ವಿಚಾರವಾಗಿದೆ ಅದನ್ನು ವಕ್ಫ್‌ ಬೋರ್ಡ್‌ ತೀರ್ಮಾನಿಸುತ್ತದೆ ಎಂದು ಜಮೀರ್ ಹೇಳಿದ್ದಾರೆ. ಇದನ್ನು ಓದಿಚಿನ್ನ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು; ಇತಿಹಾಸ ನಿರ್ಮಿಸಿದ ಆಟಗಾರ್ತಿ!

ಸಾಮಾನ್ಯವಾಗಿ ರಾಜ್ಯಾದ್ಯಂತ ವಕ್ಫ್‌ ಹಾಗೂ ಮುಜರಾಯಿ ಆಸ್ತಿಗಳೆಲ್ಲವೂ 1999ಕ್ಕೆ ಮುನ್ನ ಕಂದಾಯ ಇಲಾಖೆ ವ್ಯಾಪ್ತಿಯಲ್ಲೇ ಇತ್ತು. ನಂತರ ಎಸ್‌. ಎಂ. ಕೃಷ್ಣ ಅವರು ಸಿಎಂ ಆಗಿದ್ದ ವೇಳೆ ಇದರ ವಿಂಗಡಣೆ ಆಗಿತ್ತು ಎಂದು ಜಮೀರ್ ಮಾಹಿತಿ ನೀಡಿದರು.

75ನೇ ವರ್ಷದ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಲಾಗುತ್ತಿತ್ತು. ಈ ಪರಿಪಾಠವನ್ನು ಪ್ರತಿ ವರ್ಷ ಮುಂದುವರೆಸಲಾಗುವುದು ಎಂದು ಜಮೀರ್ ಹೇಳಿದರು

Share This Article
Leave a comment