November 27, 2022

Newsnap Kannada

The World at your finger tips!

CM,election,BJP

No change of CM: Election under the leadership of Bommai- Arun Singh ಸಿಎಂ ಬದಲಾವಣೆ ಇಲ್ಲ : ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ- ಅರುಣ್ ಸಿಂಗ್

ಸಿಎಂ ಬದಲಾವಣೆ ಇಲ್ಲ : ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ- ಅರುಣ್ ಸಿಂಗ್

Spread the love

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ರೈತರ ಪರ, ದಲಿತರ ಪರ, ಯುವಕರ ಪರ ಕಾಮನ್ ಮ್ಯಾನ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ವದಂತಿ ಬಗ್ಗೆ ಮಾತನಾಡಿದ ಅರುಣ್ ಸಿಂಗ್ ಅವರು, ಸಿಎಂ ಬದಲಿಸುವ ಪ್ರಶ್ನೆ ಇಲ್ಲ, ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಿದ್ದೇವೆ. ಪೂರ್ಣ ಪ್ರಮಾಣದ ಬಹುಮತ ಸಿಗಲಿದ್ದು, ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಇದನ್ನು ಓದಿ –ಶ್ರೇಷ್ಠ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಕನ್ನಡದಲ್ಲೇ ಮೋದಿ ಟ್ವೀಟ್ – ಸಂತಾಪ

ಸಿಎಂ ಬದಲಾವಣೆ ಎಂದು ಕಾಂಗ್ರೆಸ್ ಗೊಂದಲ ಹುಟ್ಟು ಹಾಕುತ್ತಿದೆ. ಸಿಎಂ ಬದಲಾವಣೆ ಎನ್ನುವುದು ಕಾಂಗ್ರೆಸ್‍ನ ಅತಿದೊಡ್ಡ ಷಡ್ಯಂತ್ರ. ಸಿದ್ದರಾಮಯ್ಯ ಡಿಕೆಶಿ ನಡುವೆ ಒಡಕಿದೆ. ಅದನ್ನು ಮುಚ್ಚಿ ಹಾಕಲು ಸಿಎಂ ಬದಲಾವಣೆ ವಿಚಾರ ಹುಟ್ಟು ಹಾಕಿದ್ದಾರೆ. ಕಾಂಗ್ರೆಸ್ ನಾಯಕರೇ ಇಲ್ಲದ ಪಕ್ಷ ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಸತ್ಯ ಇಲ್ಲ ಎಂದು ವಾಗ್ದಾಳಿ ನಡೆಸಿದರು.

error: Content is protected !!