November 25, 2024

Newsnap Kannada

The World at your finger tips!

kalarbugi , News , Drought

ರಾಜ್ಯದಲ್ಲಿ ಮೋಡ ಬಿತ್ತನೆ ಇಲ್ಲ :ಮಂಡ್ಯದ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಗೆ ? ಕೃಷಿ ಸಚಿವ

Spread the love

ಮಂಡ್ಯ : ರಾಜ್ಯದಲ್ಲಿ ಜೂನ್​ ತಿಂಗಳಲ್ಲಿ ಮುಂಗಾರು ಮಳೆ ಆಗಮನ ವಿಳಂಬದಿಂದ ಅಲ್ಪ ಸ್ವಲ್ಪ ಮಳೆಯಾಗಿತ್ತು. ಆದರೆ ಈ ಮೋಡ ಬಿತ್ತನೆ ಮಾಡುವ ಯಾವುದೇ ಚಿಂತನೆ ಸರ್ಕಾರ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಯ ಸಾಮಾನ್ಯ ಪ್ರಮಾಣಕ್ಕಿಂತಾ ಶೇ. 3 ರಷ್ಟು ಹೆಚ್ಚುವರಿ ಮಳೆಯಾಗಿತ್ತು. ಅದರಲ್ಲಿಯೂ ಕಳರಾವಳಿ ಭಾಗದಲ್ಲಿ ಭಾರೀ ಮಳೆ ಆಗಿದೆ. ಆದರೆ ಆಗಸ್ಟ್​ ತಿಂಗಳಲ್ಲಿ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಬಿಸಿಲಿನ ಬೇಗೆಗೆ ಜನರು ಕಂಗಾಲಾಗಿದ್ದಾರೆ. ಇವೆಲ್ಲದರ ಮಧ್ಯೆ ಮೋಡಬಿತ್ತನೆ ಎಂಬ ಮಾತು ಸಹ ಕೇಳಿ ಬಂದಿದೆ.

ಮೋಡಬಿತ್ತನೆ ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ.ಕೆನರಾ ಬ್ಯಾಂಕ್​ನಲ್ಲಿ ಡಿಗ್ರಿ ಪಾಸಾದವರಿಗೆ ಉದ್ಯೋಗ: ಇಂದೇ ಕೊನೆದಿನ

ಈ ಹಿಂದೆ ಮೋಡ ಬಿತ್ತನೆ ಮಾಡಿದಾಗ ಸೂಕ್ತ ಪ್ರತಿಫಲ ಸಿಕ್ಕಿಲ್ಲ. ಆಗಸ್ಟ್​ 30ರೊಳಗೆ ಹಳ್ಳಿಗಳನ್ನು ವೀಕ್ಷಣೆ ಮಾಡಿ ವರದಿ ನೀಡಲು ಡಿಸಿಗಳಿಗೆ ತಿಳಿಸಿದ್ದೇವೆ. ಸೆಪ್ಟೆಂಬರ್​​ 4ರೊಳಗೆ ಬರ ಘೋಷಣೆ ಬಗ್ಗೆ ತೀರ್ಮಾನ ಮಾಡಿ, ಸೆಪ್ಟೆಂಬರ್​ ಮೊದಲ ವಾರದಲ್ಲಿ ಬರಗಾಲ ಘೋಷಣೆ ಸಾಧ್ಯತೆ ಇದೆ ಎಂದು ತಿಳಿಸಿದರು.

ಅಪರೇಷನ್ ಹಸ್ತದ ಅವಶ್ಯಕತೆ ಇಲ್ಲ:

ಅಪರೇಷನ್ ಹಸ್ತದ ಅವಶ್ಯಕತೆ ಇಲ್ಲ, ನಾವು 136 ಸ್ಥಾನ ಗೆದ್ದಿದ್ದೇವೆ. ನಮ್ಮ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಬಂದರೆ ಕರೆದುಕೊಳ್ಳುತ್ತೇವೆ. ನಾವು ಯಾರ ಮನೆಯ ಬಾಗಿಲನ್ನೂ ತಟ್ಟಿಲ್ಲ. ಮಂಡ್ಯ ಜಿಲ್ಲೆಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಬಹುದುಎಂದು ಹೇಳಿ ಆ ಮಾಜಿಗಳ ಹೆಸರನ್ನು ಗೌಪ್ಯವಾಗಿ ಇಟ್ಟರು

Copyright © All rights reserved Newsnap | Newsever by AF themes.
error: Content is protected !!