ಮಂಡ್ಯ : ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಮುಂಗಾರು ಮಳೆ ಆಗಮನ ವಿಳಂಬದಿಂದ ಅಲ್ಪ ಸ್ವಲ್ಪ ಮಳೆಯಾಗಿತ್ತು. ಆದರೆ ಈ ಮೋಡ ಬಿತ್ತನೆ ಮಾಡುವ ಯಾವುದೇ ಚಿಂತನೆ ಸರ್ಕಾರ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಯ ಸಾಮಾನ್ಯ ಪ್ರಮಾಣಕ್ಕಿಂತಾ ಶೇ. 3 ರಷ್ಟು ಹೆಚ್ಚುವರಿ ಮಳೆಯಾಗಿತ್ತು. ಅದರಲ್ಲಿಯೂ ಕಳರಾವಳಿ ಭಾಗದಲ್ಲಿ ಭಾರೀ ಮಳೆ ಆಗಿದೆ. ಆದರೆ ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಬಿಸಿಲಿನ ಬೇಗೆಗೆ ಜನರು ಕಂಗಾಲಾಗಿದ್ದಾರೆ. ಇವೆಲ್ಲದರ ಮಧ್ಯೆ ಮೋಡಬಿತ್ತನೆ ಎಂಬ ಮಾತು ಸಹ ಕೇಳಿ ಬಂದಿದೆ.
ಮೋಡಬಿತ್ತನೆ ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ.ಕೆನರಾ ಬ್ಯಾಂಕ್ನಲ್ಲಿ ಡಿಗ್ರಿ ಪಾಸಾದವರಿಗೆ ಉದ್ಯೋಗ: ಇಂದೇ ಕೊನೆದಿನ
ಈ ಹಿಂದೆ ಮೋಡ ಬಿತ್ತನೆ ಮಾಡಿದಾಗ ಸೂಕ್ತ ಪ್ರತಿಫಲ ಸಿಕ್ಕಿಲ್ಲ. ಆಗಸ್ಟ್ 30ರೊಳಗೆ ಹಳ್ಳಿಗಳನ್ನು ವೀಕ್ಷಣೆ ಮಾಡಿ ವರದಿ ನೀಡಲು ಡಿಸಿಗಳಿಗೆ ತಿಳಿಸಿದ್ದೇವೆ. ಸೆಪ್ಟೆಂಬರ್ 4ರೊಳಗೆ ಬರ ಘೋಷಣೆ ಬಗ್ಗೆ ತೀರ್ಮಾನ ಮಾಡಿ, ಸೆಪ್ಟೆಂಬರ್ ಮೊದಲ ವಾರದಲ್ಲಿ ಬರಗಾಲ ಘೋಷಣೆ ಸಾಧ್ಯತೆ ಇದೆ ಎಂದು ತಿಳಿಸಿದರು.
ಅಪರೇಷನ್ ಹಸ್ತದ ಅವಶ್ಯಕತೆ ಇಲ್ಲ:
ಅಪರೇಷನ್ ಹಸ್ತದ ಅವಶ್ಯಕತೆ ಇಲ್ಲ, ನಾವು 136 ಸ್ಥಾನ ಗೆದ್ದಿದ್ದೇವೆ. ನಮ್ಮ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಬಂದರೆ ಕರೆದುಕೊಳ್ಳುತ್ತೇವೆ. ನಾವು ಯಾರ ಮನೆಯ ಬಾಗಿಲನ್ನೂ ತಟ್ಟಿಲ್ಲ. ಮಂಡ್ಯ ಜಿಲ್ಲೆಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಬಹುದುಎಂದು ಹೇಳಿ ಆ ಮಾಜಿಗಳ ಹೆಸರನ್ನು ಗೌಪ್ಯವಾಗಿ ಇಟ್ಟರು
- ಮಂಡ್ಯ ನಗರಕ್ಕೆ ನೀರು ಸರಬರಾಜು ದರ ಮಾಸಿಕ 225 ರು ನಿಗದಿ – ಜಿಲ್ಲಾ ಮಂತ್ರಿ ಸೂಚನೆ
- 4144 ಮೆಟ್ರಿಕ್ ಟನ್ ದಾಟಿದ ‘ಮೈಸೂರು ಸ್ಯಾಂಡಲ್ ಸೋಪ್’ ಮಾಸಿಕ ಉತ್ಪಾದನೆ
- ನಂದಿನಿ ಹಾಲಿನ ದರ ಏರಿಕೆ ?
- ಶೀಘ್ರದಲ್ಲೇ BMTCಗೆ 921 ಎಲೆಕ್ಟ್ರಿಕ್ ಬಸ್ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರು ಅನುದಾನ ಬಿಡುಗಡೆ – ಸಿಎಂ
- ಐಸಿಸ್ ಉಗ್ರರ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡ ಸಿಎಂ : ಯತ್ನಾಳ್