Politics

ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ : ಸ್ಪೀಕರ್ ಅಂಗೀಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ಗೌರವ್ ಗೊಗೋಯ್ ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಲೋಕಸಭೆಯ ಸಭಾಧ್ಯಕ್ಷ ಓಂ ಬಿರ್ಲಾ ಅಂಗೀಕರಿಸಿದರು.

ನಿಯಮಗಳ ಅಡಿಯಲ್ಲಿ ಅವಿಶ್ವಾಸ ನಿರ್ಣಯಕ್ಕೆ 50ಕ್ಕೂ ಹೆಚ್ಚು ಸಂಸದರ ಬೆಂಬಲ ಬೇಕು.

ಸಂಸದರ ಸಂಖ್ಯೆಯನ್ನು ಎಣಿಕೆ ಮಾಡಿದ ಬಳಿಕ ಬಿರ್ಲಾ ಅಂಗೀಕಾರ ನೀಡಿ, ಚರ್ಚೆಯ ಸಮಯವನ್ನು ನಿಗದಿಪಡಿಸಿ ಸದನಕ್ಕೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಸದನ ಆರಂಭವಾಗುತ್ತಿದ್ದಂತೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಗೊಗೊಯ್ ಅವರಿಂದ ನೋಟಿಸ್ ಸ್ವೀಕರಿಸಲಾಗಿದೆ ಎಂದು ಸ್ಪೀಕರ್ ಹೇಳಿದರು.

ನಿರ್ಣಯದ ಅಂಗೀಕಾರವನ್ನು ಬೆಂಬಲಿಸುವ ಸದಸ್ಯರನ್ನು ಎದ್ದು ನಿಲ್ಲುವಂತೆ ಬಿರ್ಲಾ ಕೋರಿದರು. ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಸದಸ್ಯರು ತಲೆ ಎಣಿಕೆಗಾಗಿ ಎದ್ದುನಿಂತರು. ಸಂಸದರ ಸಂಖ್ಯೆಯನ್ನು ಎಣಿಕೆ ಮಾಡಿದ ಸ್ಪೀಕರ್ ನಿರ್ಣಯವನ್ನು ಒಪ್ಪಿಕೊಂಡರು.

ಎಲ್ಲಾ ಪಕ್ಷಗಳೊಂದಿಗೆ ಸಮಾಲೋಚಿಸಿದ ನಂತರ ನಿರ್ಣಯದ ಮೇಲಿನ ಚರ್ಚೆಗೆ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಲಾಗುವುದು ಎಂದು ಬಿರ್ಲಾ ಹೇಳಿದರು.

ಮಣಿಪುರ ಹಿಂಸಾಚಾರದ ಬಗ್ಗೆ ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡುವಂತೆ ಒತ್ತಾಯಿಸಲು 26 ವಿರೋಧ ಪಕ್ಷಗಳ ಒಕ್ಕೂಟವು ಅವಿಶ್ವಾಸ ನಿರ್ಣಯವನ್ನು ಮಂಡಿಸಲು ನಿರ್ಧರಿಸಿದ್ದವು ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯವು ಅಂಕಿಅಂಶ ಪರೀಕ್ಷೆಯಲ್ಲಿ ಸೋಲುತ್ತದೆಯಾದರೂ ಚರ್ಚೆಯ ಸಮಯದಲ್ಲಿ ಮಣಿಪುರ ವಿಷಯದ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದು ವಿಪಕ್ಷಗಳ ತಂತ್ರವಾಗಿದೆ. ಅಲ್ಲದೆ, ಮಣಿಪುರ ಹಿಂಸಾಚಾರದ ಬಗ್ಗೆ ಸದನದಲ್ಲಿ ಮೋದಿಯವರ ಬಾಯಿ ಬಿಡಿಸುವುದೂ ಇದರ ಹಿಂದಿನ ಕಾರ್ಯತಂತ್ರವಾಗಿದೆ ಎಂದೂ ಅವರು ಹೇಳಿದ್ದಾರೆ.DRDO ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಈ ಮಧ್ಯೆ, ಮಣಿಪುರ ಗಲಭೆ ಕುರಿತ ಚರ್ಚೆಗೆ ಒತ್ತಾಯಿಸಿ ವಿಪಕ್ಷಗಳು ಗದ್ದಲ ಮುಂದುವರಿಸಿದ್ದರಿಂದ ಲೋಕಸಭೆ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

Team Newsnap
Leave a Comment

Recent Posts

ಪಾದಚಾರಿಗಳ ಮೇಲೆ ಬೈಕ್ ಹರಿದು ನಾಲ್ವರು ಸಾವು

ವಿಜಯಪುರ: ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ… Read More

September 6, 2024

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ಕಲಿಸಿ ಸಮಾಜದಲ್ಲಿ ಒಂದು ಉತ್ತಮವಾಗಿ… Read More

September 5, 2024

ಗುರು ಎಂಬೊ ಅರಿವಿನ ವಿಸ್ತಾರ….

'ಗುರುವಿನ ಗುಲಾಮನಾಗುವ ತನಕದೊರೆಯದಣ್ಣ ಮುಕುತಿ".ಎಂದು ಪುರಂದರದಾಸರು ಗುರುವಿನ ಮಹಿಮೆಯನ್ನು ಬಹು ಹಿಂದೆಯೇ ಹೇಳಿದ್ದಾರೆ,  ಪ್ರಾಚೀನ ಕಾಲದಲ್ಲಿ ಗುರು ತನ್ನ ಶಿಷ್ಯನಿಗೆ  ತನ್ನ… Read More

September 5, 2024

ನಿಸ್ವಾರ್ಥ ಜೀವಿ ಜ್ಞಾನದ ಭುವಿ

"ಗುರುವಿನ ಗುಲಾಮನಾಗುವ ತನಕ ದೊರೆಯದೆನ್ನ ಮುಕುತಿ"ಎಂಬಂತೆ ವಿದ್ಯಾರ್ಥಿಗಳು ಗುರುವಿನ ಗುಲಾಮನಾದಾಗಲೇ ಅಪ್ರತಿಮ ಬದುಕು ರೂಪಿಸಿಕೊಳ್ಳುವನು ಎಂಬುದು ಅಕ್ಷರಶಃ ಸತ್ಯ.ಅಕ್ಷರಗಳ ಕಲಿಸುತ… Read More

September 5, 2024

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ… Read More

September 5, 2024

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಜೋಡಿ

ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್… Read More

September 5, 2024