ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದು ಪಡಿಸುವ ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿವರು ಸಿಬಿಎಸ್‌ಇ ರೀತಿಯಲ್ಲಿ ರಾಜ್ಯದಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಪಡಿಸಲಾಗುವ ಬಗ್ಗೆ ಯಾವುದೇ ಪ್ರಸ್ತಾವನೆ ಸಧ್ಯಕ್ಕೆ ಇಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜೂನ್ 21ರಿಂದ ಆರಂಭಿಸಲು ಸರ್ಕಾರ ಈಗಾಗಲೇ ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ, ಪರೀಕ್ಷೆಗಳನ್ನು ನಡೆಸುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ರದ್ದಾಗುತ್ತವೆ ಎಂದು ಹಬ್ಬಿರುವ ಊಹಾಪೋಹಗಳಿಗೆ ಶಿಕ್ಷಣ ಸಚಿವರು ತೆರೆ ಎಳೆದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ