CET, JEE, NEET ತರಬೇತಿ ಹೆಸರಿನಲ್ಲಿ ಹೆಚ್ಚು ಶುಲ್ಕ ಪಡೆಯುವಂತಿಲ್ಲ PU ಕಾಲೇಜುಗಳಿಗೆ- ಪಿಯು ಬೋರ್ಡ್ ಖಡಕ್ ಎಚ್ಚರಿಕೆ

Team Newsnap
1 Min Read
Second PUC result will be announced tomorrow ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟ

ಪದವಿ ಪೂರ್ವ ಕಾಲೇಜುಗಳಲ್ಲಿ (PUC) ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ PU ಬೋರ್ಡ್ CET, AIEEE, IIT, JEE, NEET, ಇಂಟೆರ್ಗ್ರೇಟೆಡ್ ಕೋರ್ಸ್, ಬ್ರಿಡ್ಜ್ ಕೋರ್ಸ್ ಇತ್ಯಾದಿ ಹೆಸರಿನಲ್ಲಿ ಕಾನೂನು ಭಾಹಿರವಾಗಿ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಪಡೆಯುವಂತಿಲ್ಲ ಎಂದು ಎಚ್ಚರಿಕೆ ನೀಡಿದೆ.

ಇದನ್ನು ಓದಿ :ಚೀನಾದ ಶಾಂಘೈನಲ್ಲಿ ಕರೋನಾದಿಂದಾಗಿ ಕಳೆದ ತಿಂಗಳು ಒಂದೇ ಒಂದು ಕಾರು ಕೂಡ ಮಾರಾಟವಾಗಿಲ್ಲ

ಮಾರ್ಗಸೂಚಿಯನ್ನು ಪ್ರಕಟಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ಹೈಕೋರ್ಟ್ ತೀರ್ಪಿನ ಅನ್ವಯ 2022-23ನೇ ಸಾಲಿನಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ನಿಗದಿ ಮಾಡಿರುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕು. ಸಮವಸ್ತ್ರ ನಿಯಮ ಇಲ್ಲದೇ ಇರುವಂತ ಕಾಲೇಜುಗಳಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ವಸ್ತ್ರಗಳನ್ನು ಧರಿಸುವಂತೆ ಸೂಚಿಸಿದೆ.

EDUCATION

ಪಿಯು ಪಠ್ಯಕ್ರಮವನ್ನು ಹೊರತುಪಡಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪಠ್ಯಕ್ರಮದ ಬಗ್ಗೆ ಬೋಧನೆ ಮಾಡುವುದು, ಇದಕ್ಕಾಗಿ ಹೆಚ್ಚು ಶುಲ್ಕ ಪಡೆಯುವಂತಿಲ್ಲ. ಒಂದು ವೇಳೆ ಕಂಡು ಬಂದಲ್ಲಿ, ಅಂತಹ ಕಾಲೇಜುಗಳ ಮಾನ್ಯತೆ ರದ್ದು ಪಡಿಸಲಾಗುವುದು. ಮತ್ತು ಆ ಸಂಸ್ಥೆಗಳ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Share This Article
Leave a comment