ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಕೊರತೆಯ ಸಮಸ್ಯೆ ಇಲ್ಲದ ಕಾರಣ ಲೋಡ್ ಶೆಡ್ಡಿಂಗ್ ನಡೆಯದು. ಕೆಲವೊಂದು ಪ್ರದೇಶಗಳಲ್ಲಿ ನಿರ್ವಹಣಾ ಕಾಮಗಾರಿಯ ಕಾರಣದಿಂದ ತಾತ್ಕಾಲಿಕ ತೊಂದರೆ ಉಂಟಾಗಬಹುದಾದರೂ, ಅದು ಲೋಡ್ ಶೆಡ್ಡಿಂಗ್ ಅಲ್ಲ ಎಂದು ಸ್ಪಷ್ಟಪಡಿಸಿದರು.
ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ವಿದ್ಯುತ್ ದರ ಏರಿಕೆಯಾದರೂ ಗೃಹಜ್ಯೋತಿ ಯೋಜನೆಗೆ ಯಾವುದೇ ಪರಿಣಾಮ ಇರುವುದಿಲ್ಲ. ಈ ಯೋಜನೆ ಮುಂದುವರಿಯುತ್ತದೆ” ಎಂದು ಹೇಳಿದ್ದಾರೆ.
ಇದನ್ನು ಓದಿ -ESIC ಕರ್ನಾಟಕದಲ್ಲಿ 111 ಹುದ್ದೆಗಳ ಭರ್ತಿ – ಮಾರ್ಚ್ 5ರಂದು ನೇರ ಸಂದರ್ಶನ
ರಾಜ್ಯದಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಬದ್ಧವಿದ್ದು, ಸಾರ್ವಜನಿಕರು ಲೋಡ್ ಶೆಡ್ಡಿಂಗ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು