January 8, 2025

Newsnap Kannada

The World at your finger tips!

dasara,mysore,heritage city

Dasara 2022- This time gold pass canceled: Minister Somashekhar ನಾಡಹಬ್ಬ ದಸರಾ - 2022 ಈ ಬಾರಿ ಗೋಲ್ಡ್‌ ಪಾಸ್‌ ರದ್ದು: ಸಚಿವ ಸೋಮಶೇಖರ್‌ ಸ್ಪಷ್ಟನೆ

ಕೊರೊನಾದಿಂದ ಮೃತಪಟ್ಟ ರೈತರ ಸಾಲ ಮನ್ನಾ ಇಲ್ಲ- ಜೂನ್ 1 ರವರೆಗೆ ಸಾಲ ಮರುಪಾವತಿಗೆ ಅವಕಾಶ – ಎಸ್ ಟಿ ಎಸ್

Spread the love

ಕೊರೊನಾದಿಂದ ಮೃತರಾದ ರೈತರ ಸಾಲಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಸಹಕಾರ ಸಚಿವ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಮುನಿರಾಜುಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಸಾಲಮನ್ನಾ ಸಾಧ್ಯವಿಲ್ಲ ಎಂದಿದ್ದಾರೆ.

ಕೋವಿಡ್‍ನಿಂದ ಮೃತರಾದ ರೈತರ ಸಾಲಮನ್ನಾ ಮಾಡಬೇಕು. ಈಗಾಗಲೇ ರೈತರ ಮನೆಯಲ್ಲಿ ದೀಪ ಹಾರಿ ಹೋಗಿದೆ. ಹೀಗಾಗಿ ಸರ್ಕಾರ ಕೊರೊನಾದಿಂದ ಮೃತರಾದ ರೈತರ ಸಾಲಮನ್ನಾ ಮಾಡಬೇಕು ಎಂದು ಬಿಜೆಪಿ ಸದಸ್ಯ ಮುನಿರಾಜುಗೌಡ ಒತ್ತಾಯ ಮಾಡಿದರು.

ಸಚಿವ ಸೋಮಶೇಖರ್ ಉತ್ತರ ನೀಡಿ ರಾಜ್ಯದಲ್ಲಿ 1-2 ಕೊರೊನಾ ಅಲೆಯಲ್ಲಿ ಮೃತಪಟ್ಟ ರೈತರ ಪೈಕಿ 10,437 ರೈತರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮತ್ತು ಗ್ರಾಮೀಣಾಭಿವೃದ್ಧಿ ಗಳಲ್ಲಿ ಸಾಲ ಪಡೆದಿರುತ್ತಾರೆ. ಮೃತರಾದ ರೈತರ ಸಾಲದ ಮೊತ್ತ 91.97 ಕೋಟಿ ಇದೆ ಅಂತ ಮಾಹಿತಿ ನೀಡಿದರು.

ಕೊರೊನಾದಿಂದ ಮೃತರಾದ ರೈತರು ಸಹಕಾರ ಸಂಘಗಳಲ್ಲಿ ಪಡೆದಿದ್ದ ಸಾಲಮನ್ನಾ ಮಾಡುವ ಆದೇಶ ಇಲಾಖೆ ಹೊರಡಿಸಿಲ್ಲ. ಕೊರೊನಾದಿಂದ ಮೃತಪಟ್ಟ ರೈತರು ಸೇರಿದಂತೆ ಎಲ್ಲಾ ಕುಟುಂಬಕ್ಕೆ 1.5 ಲಕ್ಷ ಆರ್ಥಿಕ ಸಹಾಯ ಸರ್ಕಾರದಿಂದ ಮಾಡಲಾಗಿದೆ. ರೈತರು ಸಾಲ ಮರುಪಾವತಿ ಮಾಡಲು ಕಂತು ಅವಧಿ ವಿಸ್ತರಣೆ ಮಾಡಲಾಗಿದೆ. ಬಡ್ಡಿ ಸಹಾಯಧನವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಈ ಯೋಜನೆಯು ಕೊರೊನಾದಿಂದ ಮೃತಪಟ್ಟ ರೈತರ ವಾರಸುದಾರರಿಗೂ ಅನ್ವಯ ಆಗುತ್ತದೆ ಎಂದು ತಿಳಿಸಿದರು.

ಲಾಭದಲ್ಲಿರುವ ಡಿಸಿಸಿ ಬ್ಯಾಂಕ್‍ಗಳು ತಮ್ಮಲ್ಲಿರುವ ಹಣವನ್ನು ಮೃತ ರೈತ ಸಾಲಮನ್ನಾಗೆ ಬಳಕೆ ಮಾಡಲು ಓರಲ್ ಆಗಿ ಅನುಮತಿ ನೀಡಲಾಗಿದೆ ಎಂದರು.

ಜೂನ್ 1 ರ ತನಕ ಸಾಲ ಪಾವತಿಗೆ ಅವಕಾಶ :

ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದಿರುವ ರೈತರಿಗೆ ಜೂನ್ 1 ರ ತನಕ ಸಾಲ ಮರು ಪಾವತಿಗೆ ಅವಕಾಶ ನೀಡಿದೆ . ಸಾಲದ ಬಡ್ಡಿ ಸಹಾಯ ಧನ 134 ಕೋಟಿ ರುಗಳನ್ನು ಸರ್ಕಾರವೇ ಭರಿಸುತ್ತದೆ.

Copyright © All rights reserved Newsnap | Newsever by AF themes.
error: Content is protected !!