ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದರೂ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ ಡೌನ್, ನೈಟ್ ಕಪ್ಯೂ ೯ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ಹೇಳಿದ್ದರು.
ಕೊರೋನಾ ರೂಪಾಂತರಿ ಹೆಚ್ಚಳ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಇಂದು ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಗೃಹ, ಆರೋಗ್ಯ, ಶಿಕ್ಷಣ ಸಚಿವರು ಹಾಗೂ ಇಲಾಖಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಇಲ್ಲ. ನೈಟ್ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ. ಆದರೆ ನಾಳೆಯಿಂದ 15 ದಿನ ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ಪ್ರತಿಭಟನೆ, ಸತ್ಯಾಗ್ರಹಗಳಿಗೆ ಅವಕಾಶ ಇಲ್ಲ ಎಂದರು.
ಲಾಕ್ ಡೌನ್ ಬದಲಿಗೆ ರಾಜ್ಯದಲ್ಲಿ ಕೋವಿಡ್ ನಿರ್ಬಂಧಿಸಲು ಒಂದಷ್ಟು ಕಠಿಣ ನಿಯಮಗಳು ಜಾರಿಗೆ ತರಲಾಗುತ್ತಿದೆ.
ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು. ಅಪಾರ್ಟ್ ಮೆಂಟ್ ಗಳಲ್ಲಿ ಪಾರ್ಟಿ, ಜಿಮ್ ಮತ್ತು ಈಜುಕೋಳಗಳನ್ನು ನಿಷೇಧಿಲಾಗಿದೆ ಎಂದು ಸಿಎಂ ಹೇಳಿದರು.
ಮದುವೆ ಹಾಗೂ ಇತರೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವಂತಿಲ್ಲ. ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಎಂದಿದ್ದಾರೆ.
- ಖಾಸಗಿ ವಾಹನಗಳಿಗೆ ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್ ಪರಿಚಯಿಸಲು ಸರ್ಕಾರ ತೀರ್ಮಾನ
- ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
- ವಿಚಿತ್ರ ಕಾಯಿಲೆಗೆ 15 ಜನರು ಬಲಿಪಡೆದ ಅನುಮಾನಾಸ್ಪದ ಘಟನೆ
- ಆಕಸ್ಮಿಕ ಗುಂಡು ಸಿಡಿದು ವ್ಯಕ್ತಿ ಸಾವು
- ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
More Stories
ಬೆಂಗಳೂರಿನಲ್ಲಿ ಜನವರಿ 17ರಿಂದ ಯುಎಸ್ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ – ಆಸ್ಪತ್ರೆಯಲ್ಲಿ ಚಿಕಿತ್ಸೆ
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು