ಚಿತ್ರದುರ್ಗ: ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಸಾವಿರ ಮದ್ಯದಂಗಡಿ ತೆರೆಯಲು ಚಿಂತನೆ ನಡೆಸುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿದ್ದಾರೆಯೇ ಹೊರತು, ಅದನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಮುಂದಾಗಿಲ್ಲ.
ಯಾವುದೇ ಹೊಸ ಮದ್ಯದಂಗಡಿ ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಮದ್ಯದಂಗಡಿಗೆ ಹೊಸ ಪರವಾನಗಿ ನೀಡುವುದಕ್ಕೆ ಮಹಿಳೆಯರ ವಿರೋಧ ಇದೆ.
ಹಣಕಾಸಿನ ಕೊರತೆ ಇದ್ದರೂ ಮದ್ಯದಂಗಡಿ ಹೊಸ ಲೈಸೆನ್ಸ್ ನೀಡಲು ನಾನು ಅನುಮತಿ ನೀಡುವುದಿಲ್ಲ ಎಂದು ವಾಗ್ದಾನ ಮಾಡಿದರು. ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯುವ ಪ್ರಸ್ತಾಪ ಸರ್ಕಾರದ ಮುಂದಿದೆ ಎಂದು ಅಬಕಾರಿ ಸಚಿವರು ತಿಳಿಸಿದ್ದರು.



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು