ರಾಜಕೀಯ ದ್ವೇಷ ಬೇಡ

Team Newsnap
1 Min Read
No political hatred ರಾಜಕೀಯ ದ್ವೇಷ ಬೇಡ
  • ಅಮಿತ್ ಶಾ ಜತೆ ಸಿದ್ದರಾಮಯ್ಯ ಚರ್ಚೆ * ಅಕ್ಕಿ ಪೂರೈಸುವ ಬಗ್ಗೆ ಮನವರಿಕೆ

ನವದೆಹಲಿ: ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸುವ ವಿಚಾರದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಜತೆ ಚರ್ಚಿಸಿದ್ದೇನೆ. ಬಡವರಿಗೆ ಅಕ್ಕಿ ನೀಡುವ ವಿಚಾರದಲ್ಲಿ ದ್ವೇಷ ರಾಜಕೀಯ ಮಾಡುವುದು ಬೇಡ ಎಂದು ಮನವಿ ಮಾಡಿದ್ದೇನೆ. ಅಮಿತ್ ಶಾ ಕೂಡ ಈ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಗುರುವಾರ ಪತ್ರಕರ್ತರ ಜತೆ ಮಾತನಾಡಿದ ಅವರು, ನಾನು ನಿನ್ನೆ ರಾತ್ರಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆ. ಮೊದಲು ಭಾರತೀಯ ಆಹಾರ ನಿಗಮ (ಎಫ್‍ಸಿಐ) ರಾಜ್ಯಕ್ಕೆ ಅಕ್ಕಿ ಪೂರೈಕೆ ಮಾಡುವುದಾಗಿ ಪತ್ರ ನೀಡಿತ್ತು. ಆನಂತರ ರಾಜ್ಯಕ್ಕೆ ಅಕ್ಕಿ ಪೂರೈಸಲು ಆಗಲ್ಲ ಎಂದು ಹೇಳಿರುವುದನ್ನು ಅವರ ಗಮನಕ್ಕೆ ತಂದಿದ್ದೇನೆ. ಮೇಲ್ನೋಟಕ್ಕೆ ಇಲ್ಲಿ ರಾಜಕೀಯ ನಡೆದಂತೆ ಕಾಣುತ್ತಿದೆ.

ಇದರಲ್ಲಿ ದ್ವೇಷದ ರಾಜಕಾರಣ ಬೇಡ, ಬಡವರಿಗೆ ಅನ್ನ ನೀಡುವ ಕಾರ್ಯಕ್ರಮ ಇದಾಗಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯಕ್ಕೆ ಐಆರ್‍ಬಿಯ ಇನ್ನೂ ಎರಡು ಬೆಟಾಲಿಯನ್‍ಗಳನ್ನು ನೀಡುವಂತೆ ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು. ಅನ್ನಭಾಗ್ಯ ಯೋಜನೆ ಬಗ್ಗೆ ಸಂಬಂಧಪಟ್ಟ ಕೇಂದ್ರ ಸಚಿವರೊಂದಿಗೆ ಮಾತನಾಡಿ ವಾಪಸ್ ಹೋಗುತ್ತೇನೆ ಎಂದರು.ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ 386 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬುಧವಾರ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಅವರು ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು.

Share This Article
Leave a comment