ಭದ್ರತಾ ಲೋಪವಾಗಿಲ್ಲ: ಬದಲಿಗೆ ಜನರಿಲ್ಲದೇ ಖಾಲಿ ಕುರ್ಚಿಗಳಿದ್ದ ಕಾರಣ ಪಿಎಂ ರ‍್ಯಾಲಿ ರದ್ದು: ಸಿಎಂ

Team Newsnap
1 Min Read

ಭದ್ರತಾ ಲೋಪದ ಕಾರಣದಿಂದಾಗಿ ಪಂಜಾಬ್‌ನಲ್ಲಿನ ಕಾರ್ಯಕ್ರಮ ರದ್ದುಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರು ವಾಪಸ್ಸಾದರು ಎಂಬ ಬಿಜೆಪಿ ಆರೋಪವನ್ನು ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ತಳ್ಳಿಹಾಕಿದ್ದಾರೆ. ಸರ್ಕಾರದಿಂದ ಯಾವುದೇ ಭದ್ರತಾ ಲೋಪವಾಗಿಲ್ಲ, ಜನರೇ ಇಲ್ಲದ ಕಾರಣ ಬಿಜೆಪಿ ರ‍್ಯಾಲಿ ರದ್ದುಗೊಳಿಸಿದೆ ಎಂದು ಹೇಳಿದ್ದಾರೆ.

ಫ್ಲೈಓವರ್‌ ಬಳಿ ಬೃಹತ್‌ ಪ್ರತಿಭಟನೆ ನಡೆಯುತ್ತಿದ್ದರಿಂದ ಪ್ರಧಾನಿ ಮೋದಿ ಅವರು ಫ್ಲೈ ಓವರ್‌ನಲ್ಲೇ ಸಿಲುಕುವಂತಾಯಿತು. ಇದರಿಂದ ಅವರ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಇದಕ್ಕೆ ಭದ್ರತಾ ಲೋಪ ಮತ್ತು ಪಂಜಾಬ್‌ ಸರ್ಕಾರವೇ ಕಾರಣ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.


ಈ ಆರೋಪವನ್ನು ಕಾಂಗ್ರೆಸ್‌ ತಳ್ಳಿ ಹಾಕಿದೆ. ಪ್ರಧಾನಿ ಮೋದಿ ಅವರು ಪಾಲ್ಗೊಳ್ಳಬೇಕಿದ್ದ ಸಮಾರಂಭದಲ್ಲಿ ಜನರೇ ಇರಲಿಲ್ಲ. ಬರೀ ಖಾಲಿ ಕುರ್ಚಿಗಳಷ್ಟೇ ಇದ್ದವು. 70 ಸಾವಿರ ಜನರು ಪಾಲ್ಗೊಳ್ಳಬೇಕಿದ್ದ ರ‍್ಯಾಲಿಯಲ್ಲಿ ಕೇವಲ 700 ಮಂದಿ ಮಾತ್ರ ಇದ್ದರು. ಆದ ಕಾರಣ ಕಾರ್ಯಕ್ರಮ ನಡೆಸದೇ ವಾಪಸ್ಸಾಗಿದ್ದಾರೆ ಎಂದು ಪಂಜಾಬ್‌ ಸಿಎಂ ತಿಳಿಸಿದ್ದಾರೆ.

ಯಾವುದೇ ಭದ್ರತಾ ಲೋಪವಾಗಿಲ್ಲ. ಪಿಎಂ ರ‍್ಯಾಲಿ ಹಿನ್ನೆಲೆಯಲ್ಲಿ ಭದ್ರತೆಗೆ ಸಂಬಂಧಿಸಿದಂತೆ ನಾನು ನಿನ್ನೆ ರಾತ್ರಿಯೂ ಮೇಲ್ವಿಚಾರಣೆ ನಡೆಸಿದ್ದೇನೆ. ಪ್ರಧಾನಿ ಅವರ ರಸ್ತೆ ಮಾರ್ಗ ಪ್ರಯಾಣ ವ್ಯವಸ್ಥೆ ಕೊನೆ ಕ್ಷಣದಲ್ಲಿ ಮಾಡಲಾಗಿದೆ. ಅದಕ್ಕೂ ಮೊದಲು ಅವರು ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುವ ಯೋಜನೆ ಹಾಕಿಕೊಂಡಿದ್ದರು ಎಂದು ಸಿಎಂ ತಿಳಿಸಿದ್ದಾರೆ.

Share This Article
Leave a comment