ಚುನಾವಣಾ ಆಯೋಗದ ಅನುಮತಿ ಪಡೆಯದೆ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಖಡಕ್ ಎಚ್ಚರಿಕೆ ನೀಡಿದೆ.
ರಾಜ್ಯ ಚುನಾವಣಾಕಾರಿ ಮನೋಜ್ಕುಮಾರ್ ಮೀನಾ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಪತ್ರ ಬರೆದಿದ್ದಾರೆ, ಒಂದು ವೇಳೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ವರ್ಗಾವಣೆಗೊಳಿಸಿದರೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡುವಾಗ ಮುಖ್ಯ ಚುನಾವಣಾಕಾರಿಯವರ ಸಹಮತಿ ಪಡೆಯಬೇಕೆಂದು ನಿರ್ದೇಶನ ನೀಡಿದ್ದರೂ ಇತ್ತೀಚೆಗೆ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ.ಇದನ್ನು ಓದಿ –ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿ ಸ್ಪರ್ಧೆಗೆ ಸ್ಥಳೀಯ ಕಾಂಗ್ರೆಸ್ ನಾಯಕರ ಒತ್ತಾಯ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು