ದೇವೇಗೌಡರ ಕುಟುಂಬವನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿ ಮಂಡ್ಯ ಸಂಸದೆ ಸುಮಲತಾ ವಿರುದ್ಧ ಮಾಜಿ ಸಚಿವ ಎಚ್. ಡಿ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ ಜೆಡಿಎಸ್ ಪಕ್ಷ ಉಳಿಯುವುದಾದರೆ ಪ್ರಜ್ವಲ್ ರೇವಣ್ಣ ಅವರಿಂದ ಮಾತ್ರ ಎಂಬ ಸುಮಲತಾ ಹೇಳಿಕೆಯ ವಿರುದ್ಧ ಕಿಡಿಕಾರಿದರು.
ಈ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲು ಹೋದರೆ ನಾವು ಸಣ್ಣವರಾಗುತ್ತೇವೆ. ಕುಟುಂಬ ಒಡೆಯುವ ಇಂತಹ ಹೇಳಿಕೆಯನ್ನು ಸಂಸದೆ ಸುಮಲತಾ ನೀಡಬಾರದು ಎಂದರು.
ಅಕ್ರಮ ಗಣಿಗಾರಿಕೆ ಮಾಡಿದ್ದರೆ ತನಿಖೆ ಮಾಡಿ ಕ್ರಮ ಕೈಗೊಂಡು ಮುಟ್ಟುಗೋಲು ಹಾಕಬೇಕು. ಅದನ್ನು ಅದನ್ನು ಬಿಟ್ಟು ಕುಟುಂಬ ಒಡೆಯುವ ಕೆಲಸಕ್ಕೆ ಮುಂದಾಗಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಸುಮಲತಾ ಹೇಳಿಕೆ ಸಂಬಂಧ ಪ್ರಜ್ವಲ್ ರೇವಣ್ಣ ನನಗೆ ಫೋನ್ ಮಾಡಿ ನನ್ನ ಹೆಸರು ಏಕೆ ತರುತ್ತಿದ್ದಾರೆ ಎಂದು ಕೇಳಿದ್ದರು. ದಿವಂಗತ ನಟ ಅಂಬರೀಶ್ ಬಗ್ಗೆ ಅಪಾರವಾದ ಗೌರವವಿದೆ. ಕುಮಾರಸ್ವಾಮಿ ಹಾಗೂ ಅಂಬರೀಶ್ ಅವರೊಂದಿಗಿನ ಸಂಬಂಧ ಹೇಗಿತ್ತು ಎಂದು ನಾನು ಕಂಡಿದ್ದೇನೆ. ಕುಮಾರಸ್ವಾಮಿ ಎಂದಿಗೂ ಸಹ ದ್ವೇಷದ ರಾಜಕಾರಣ ಮಾಡಿಲ್ಲ. ಬಡವರ ಬಗ್ಗೆ ಕರುಣೆ ಇರುವ ರಾಜಕಾರಣ ಕುಮಾರಸ್ವಾಮಿ. ದೇವೇಗೌಡರ ಕುಟುಂಬ ಯಾರಿಂದಲೂ ಸಂಸ್ಕೃತಿ ಕಲಿಯಬೇಕಾಗಿಲ್ಲ ಎಂದು ತಿರುಗೇಟು ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ