ಜೂನ್ 1ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಬಿಲ್ ಕಟ್ಟಬೇಡಿ. 200 ಯೂನಿಟ್ ಮೇಲೆ ಎಷ್ಟು ಹೆಚ್ಚುವರಿ ಬಳಸುವಿರೋ ಅದಕ್ಕೆ ಮಾತ್ರ ಬಿಲ್ ಕಟ್ಟಿ ಎಂದು ಸಂಸದ ಪ್ರತಾಪ್ ಸಿಂಹ ರಾಜ್ಯದ ಜನತೆಗೆ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಮುಖ ನೋಡಿ ಯಾರೂ ಮತ ಹಾಕಿಲ್ಲ. ಗ್ಯಾರಂಟಿ ಕಾರ್ಡ್ ನೋಡಿ ಮತ ಹಾಕಿದ್ದಾರೆ, ಅದು ನೆನಪಿರಲಿ. ನಾವು ಸೋತಿದ್ದೇವೆ, ಸತ್ತಿಲ್ಲ. ಕೊಟ್ಟ ಭರವಸೆ ಈಡೇರಿಸಿ. ಜೂನ್ 1ರವರೆಗೆ ಕಾಯುತ್ತೇನೆ. ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ ಜೂನ್ 1ರಿಂದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರಾಜಸ್ಥಾನದಲ್ಲಿ ಕಾಂಗ್ರೆಸ್ ಇದೇ ರೀತಿ ಭರವಸೆ ನೀಡಲಾಗಿತ್ತು. ಇಲ್ಲಿಯವರೆಗೆ ಇದು ಜಾರಿಯಾಗಿಲ್ಲ. ಸಿದ್ದರಾಮಯ್ಯ ಅಥವಾ ನಾನು ಯಾರೂ ಆರ್ಥಿಕ ತಜ್ಞರಲ್ಲ. ಸಿಎಂ ಕುರ್ಚಿ ಎನ್ನುವುದು ಯಾರ ಸ್ವತ್ತೂ ಅಲ್ಲ ಎಂದರು.
ವಿಧಾನಸೌಧದಲ್ಲಿ ಕೂತು ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತೀರಾ? ಮೊದಲು ಪೊಲೀಸ್ ಇಲಾಖೆಗೆ ಧಮ್ಕಿ ಹಾಕುವುದನ್ನು ನಿಲ್ಲಿಸಿ. ಫೆಬ್ರವರಿಯಲ್ಲಿ ಅಶ್ವಥ್ ನಾರಾಯಣ್ ನೀಡಿದ ಹೇಳಿಕೆಗೆ ಈಗ ಧಮ್ಕಿ ಹಾಕಿ ಎಫ್‌ಐಆರ್ ಮಾಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ವಿಧಾನಸಭಾ ಚುನವಣಾ ಫಲಿತಾಂಶದ ಪರಿಣಾಮ ಲೋಕಸಭಾ ಚುನಾವಣೆಯ ಮೇಲೆ ಬೀರಲ್ಲ. ದೇಶಕ್ಕೆ ಎಂತಹ ನಾಯಕ ಬೇಕು ಎಂಬುದು ಕನ್ನಡಿಗರಿಗೆ ಗೊತ್ತಿದೆ. ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಬಿಜೆಪಿ ಎಚ್ಚೆತ್ತುಕೊಳ್ಳಬೇಕಿತ್ತು. ಅವತ್ತು ಎಚ್ಚೆತ್ತುಕೊಂಡಿದ್ದರೆ ಬಿಜೆಪಿಗೆ ಇವತ್ತು ಈ ಸ್ಥಿತಿ ಬರುತ್ತಿರಲಿಲ್ಲ. ಗ್ಯಾರಂಟಿ ಸ್ಕೀಂ ಪರ ನಾನಿದ್ದೇನೆ. ಇದನ್ನು ಓದಿ –ತಮಿಳು ಕಾರ್ತಿ ಚಿತ್ರಕ್ಕೆ ಕಾಂತಾರ ರಿಷಬ್ ಶೆಟ್ಟಿ ಸಾಥ್
ಆದಾಯದ ಆಧಾರದ ಮೇಲೆ ಖರ್ಚು ಮಾಡಬೇಕು ಎಂಬ ನಿಯಮ ವಿಧಾನಸಭೆಯಲ್ಲಿದೆ. ವಿತ್ತಿಯ ಹೊಣೆಗಾರಿಕೆ ಬಿಲ್ ಕರ್ನಾಟಕದಲ್ಲಿ ಪಾಸ್ ಆಗಿದೆ. ಮುಂದಿನ ತಲೆಮಾರನ್ನು ಅಪಾಯಕ್ಕೆ ತಳ್ಳಬೇಡಿ. ಗ್ಯಾರಂಟಿ ಕಾರ್ಡ್‌ನಲ್ಲಿ ಷರತ್ತು ಅನ್ವಯ ಎಂದು ಎಲ್ಲಿಯೂ ಹಾಕಿಲ್ಲ. ಎಲ್ಲಾ ಮನೆಯ ಯಜಮಾನಿಗೆ 2 ಸಾವಿರ ಕೊಡಬೇಕು. ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು