ವಿಜಯ್ ಮಲ್ಯಗೆ ಜಾಮೀನು ರಹಿತ ಬಂಧನ ವಾರೆಂಟ್

Team Newsnap
1 Min Read

ನವದೆಹಲಿ : ಮುಂಬೈ ಸಿಬಿಐ ವಿಶೇಷ ನ್ಯಾಯಾಲಯ ಉದ್ಯಮಿ ವಿಜಯ್ ಮಲ್ಯ (Vijay Mallya) ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ (Non Bailable Warrant) ಜಾರಿ ಮಾಡಿದೆ.

ವಿಜಯ್ ಮಲ್ಯ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಿಂದ ( Indian Overseas Bank ) ಲೋನ್ ಪಡೆದಿದ್ದು, ಸಾಲ ಪಾವತಿಸದ ಹಿನ್ನೆಲೆ ವಾರೆಂಟ್ ಜಾರಿ ಮಾಡಲಾಗಿದೆ.

ಉದ್ಯಮಿ ವಿಜಯ್ ಮಲ್ಯ 2007-2012ರ ಅವಧಿಯಲ್ಲಿ 180 ಕೋಟಿ ರೂ. ಸಾಲ ಪಡೆದಿದ್ದರು.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಮಲ್ಯ ಸೇರಿ ಹತ್ತು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ,ಇದೀಗ ವಿಜಯ್ ಮಲ್ಯಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಬಾಕಿ ಉಳಿದ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ.

Share This Article
Leave a comment